ದೇಶ

ಕೇಜ್ರಿವಾಲ್ ವಿರುದ್ಧ ವಾರೆಂಟ್ ಜಾರಿ ಮಾಡಿದ ಅಸ್ಸಾಂ ಕೋರ್ಟ್

Srinivas Rao BV
ಗುವಾಹಟಿ: ಅಸ್ಸಾಂ ನ ನ್ಯಾಯಾಲಯವೊಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ವಿರುದ್ಧ ಜಾಮೀನು ಪಡೆಯಬಹುದಾದ ವಾರೆಂಟ್ ಜಾರಿ ಮಾಡಿದೆ. 
ಮಾನನಷ್ಟ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಖುದ್ದು ಹಾಜರಾಗಲು ವಿಫಲರಾಗಿದ್ದಕ್ಕೆ ಕೇಜ್ರಿವಾಲ್ ವಿರುದ್ಧ ಕೋರ್ಟ್ ವಾರೆಂಟ್ ಜಾರಿ ಮಾಡಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಮಾನನಷ್ಟ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ಬಿಜೆಪಿ ನಾಯಕ ಸುರ್ಜೋ ರಂಗ್‍ಫರ್ ಎಂಬುವವರು ಕೇಜ್ರಿವಾಲ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. 
ಪ್ರಧಾನಿ ನರೇಂದ್ರ ಮೋದಿ ಅವರ ಪದವಿಗಳೆಲ್ಲಾ ನಕಲಿ ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರ ಶೈಕ್ಷಣಿಕ ಅರ್ಹತೆ ಬಗ್ಗೆ ಮಾನನಷ್ಟ ಹೇಳಿಕೆ ನೀಡಿದ ಆರೋಪದ ಮೇಲೆ ಸುರ್ಜೋ ರಂಗ್‍ಫರ್ ಕೇಜ್ರಿವಾಲ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. 
ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದ ಅಸ್ಸಾಂ ನ ಕೋರ್ಟ್ ಜ.30 ರಂದು ಕೋರ್ಟ್ ಎದುರು ಹಾಜರಾಗುವಂತೆ ನೋಟಿಸ್ ಜಾರಿ ಮಾಡಿತ್ತು. ಆದರೆ ಕೋರ್ಟ್ ಗೆ ಹಾಜರಾಗದ ಕಾರಣ ಈಗ ಅವರ ವಿರುದ್ಧ ವಾರೆಂಟ್ ಜಾರಿ ಮಾಡಿ ಮೇ.8 ಕ್ಕೆ ವಿಚಾರಣೆಯನ್ನು ಮುಂದೂಡಿದೆ. 
SCROLL FOR NEXT