ಲಖನೌ: ಜಿಲ್ಲಾ ಕೇಂದ್ರಗಳಲ್ಲಿ 24 ಗಂಟೆ, ತಾಲೂಕು ಕೇಂದ್ರಗಳಲ್ಲಿ 20 ಗಂಟೆ ಹಾಗೂ ಹಳ್ಳಿಗಳಲ್ಲಿ ನಿತ್ಯ 18 ಗಂಟೆ ವಿದ್ಯುತ್ ಪೂರೈಸುವಂತೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮಂಗಳವಾರ ಆದೇಶಿಸಿದ್ದಾರೆ.
ಯೋಗಿ ಆದಿತ್ಯನಾಥ್ ನೇತೃತ್ವದಲ್ಲಿ ಇಂದು ನಡೆದ ಎರಡನೇ ಸಚಿವ ಸಂಪುಟ ಸಭೆಯಲ್ಲಿ ಉತ್ತರ ಪ್ರದೇಶ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ ಎಂದು ಸಚಿವ ಸಂಪುಟ ಸಭೆಯ ನಂತರ ಇಂಧನ ಸಚಿವ ಶ್ರೀಕಾಂತ್ ಶರ್ಮಾ ಅವರು ವರದಿಗಾರರಿಗೆ ತಿಳಿಸಿದ್ದಾರೆ.
ಗ್ರಾಮೀಣ ಪ್ರದೇಶದಲ್ಲಿ ದೋಷಪೂರಿತ ಅಥವಾ ಸುಟ್ಟ ಟ್ರಾನ್ಸ್ ಫಾರ್ಮ್ ಗಳನ್ನು ಈ ಕೂಡಲೇ ಬದಲಾಯಿಸುವಂತೆ ಸಿಎಂ ಆದೇಶ ನೀಡಿದ್ದು, ಕೃಷಿ ಚಟುವಟಿಕೆಗಳಿಗೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ಶ್ರೀಕಾಂತ್ ಶರ್ಮಾ ಹೇಳಿದ್ದಾರೆ.
ಎಲ್ಲರಿಗೂ ವಿದ್ಯುತ್ ಎಂಬ ಮಹತ್ವದ ಯೋಜನೆಗೆ ಏಪ್ರಿಲ್ 14ರಂದು ಯೋಗಿ ಆದಿತ್ಯನಾಥ್ ಹಾಗೂ ಕೇಂದ್ರ ಇಂಧನ ಸಚಿವ ಪಿಯುಶ್ ಗೋಯಲ್ ಸಹಿ ಹಾಕುತ್ತಿದ್ದು, 2019ರ ವೇಳೆಗೆ ಉತ್ತರ ಪ್ರದೇಶದ ಎಲ್ಲಾ ಗ್ರಾಮಗಳು ವಿದ್ಯುತ್ ಸಂಪರ್ಕ ಪಡೆಯಲಿವೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics