ಅಖಿಲೇಶ್ ದಾಸ್ ಗುಪ್ತ 
ದೇಶ

ಮಾಜಿ ಕೇಂದ್ರ ಸಚಿವ ಅಖಿಲೇಶ್ ದಾಸ್ ಗುಪ್ತ ನಿಧನ

ಮಾಜಿ ಕೇಂದ್ರ ಸಚಿವ ಹಾಗೂ ಎರಡು ಬಾರಿ ಲಖನೌ ಮೇಯರ್ ಆಗಿದ್ದ ಅಖಿಲೇಶ್ ದಾಸ್ ಗುಪ್ತ ಅವರು ಬುಧವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಲಖನೌ: ಮಾಜಿ ಕೇಂದ್ರ ಸಚಿವ ಹಾಗೂ ಎರಡು ಬಾರಿ ಲಖನೌ ಮೇಯರ್ ಆಗಿದ್ದ ಅಖಿಲೇಶ್ ದಾಸ್ ಗುಪ್ತ ಅವರು ಬುಧವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.
56 ವರ್ಷದ ಅಖಿಲೇಶ್ ದಾಸ್ ಗುಪ್ತಾ ಅವರಿಗೆ ಇಂದು ಬೆಳಗ್ಗೆ ತೀವ್ರ ಹೃದಯಾಘಾತವಾಗಿದ್ದು, ಕೂಡಲೇ ಅವರನ್ನು ಕಿಂಗ್ ಜಾರ್ಜ್ ವೈದ್ಯಕೀಯ ವಿಶ್ವವಿದ್ಯಾಲಯದ ಲರಿ ಹೃದಯಶಾಸ್ತ್ರ ವಿಭಾಗಕ್ಕೆ ದಾಖಲಿಸಲಾಗಿದೆ. ಆದರೆ ದಾರಿ ಮಧ್ಯಯೇ ಅವರು ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ದಾಸ್ ಅವರು ಪತ್ನಿ ಅಲ್ಕಾ, ಪುತ್ರ ಸಾಗರ್ ಹಾಗೂ ಪುತ್ರಿ ಸೋನಾ ಅವರನ್ನು ಅಗಲಿದ್ದಾರೆ.
ಸ್ವಾತಂತ್ರ್ಯ ಹೋರಾಟಗಾರ ಹಾಗೂ ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಬಾಬು ಬನರ್ಸಿ ದಾಸ್ ಅವರ ಪತ್ರರಾಗಿದ್ದ ಅಖಿಲೇಶ್ ದಾಸ್ ಗುಪ್ತ ಅವರು ಕಾಂಗ್ರೆಸ್ ನಿಂದ ರಾಜ್ಯಸಭೆಗೆ ಆಯ್ಕೆಯಾಗುವ ಮುನ್ನ ಮೇ 1993ರಿಂದ ನವೆಂಬರ್ 1996ರವರೆಗೆ ಲಖನೌ ಮೇಯರ್ ಆಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?