ದೇಶ

ಉಪ ಚುನಾವಣೆ: ದೆಹಲಿ, ಹಿಮಾಚಲ, ಮಧ್ಯಪ್ರದೇಶ, ಅಸ್ಸಾಂನಲ್ಲಿ ಬಿಜೆಪಿ ಗೆಲುವು

Lingaraj Badiger
ನವದೆಹಲಿ: ದೆಹಲಿ, ರಾಜಸ್ಥಾನ, ಹಿಮಾಚಲ ಪ್ರದೇಶದ ವಿಧಾನಸಭೆಗೆ ನಡೆದಿದ್ದ ಉಪಚುನಾವಣೆಯ ಫಲಿತಾಂಶ ಗುರುವಾರ ಪ್ರಕಟವಾಗಿದ್ದು,  ನಾಲ್ಕು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ ಮತ್ತು ರಾಜಸ್ಥಾನದಲ್ಲೂ ಮುನ್ನಡೆ ಕಾಯ್ದುಕೊಂಡಿದೆ. 
ದೆಹಲಿ ರಜೌರಿ ಗಾರ್ಡನ್ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಬಿಜೆಪಿ ಪಕ್ಷದ ಮಂಜಿಂದರ್ ಸಿಂಗ್ ಸಿರ್ಸಾ ಕಾಂಗ್ರೆಸ್ ಅಭ್ಯರ್ಥಿ ಮೀನಾಕ್ಷಿ ಚಾಂಡೇಲಾ ಅವರ ವಿರುದ್ಧ ಗೇಲುವು ಸಾಧಿಸಿದ್ದಾರೆ
ಮೀನಾಕ್ಷಿ ಚಾಂಡೇಲಾ ಅವರನ್ನು ೧೪,೦೦೦ ಮತಗಳ ಆಂತರದಿಂದ ಮಂಜಿಂದರ್ ಸೋಲಿಸಿದ್ದರೆ, ಎಎಪಿ ಪಕ್ಷದ ಅಭ್ಯರ್ಥಿಯನ್ನು ಮೂರನೇ ಸ್ಥಾನಕ್ಕೆ ತಳ್ಳಿದ್ದಾರೆ. 
ಅಸ್ಸಾಂನಲ್ಲಿ ಧೇಮೈ ವಿಧಾನಸಭಾ ಕ್ಷೇತ್ರ, ಮಧ್ಯಪ್ರದೇಶದ ಬಂಧಗಢ ಕ್ಷೇತ್ರದಲ್ಲೂ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ್ದು, ಹಿಮಾಚಲ ಪ್ರದೇಶ ಭೋರಂಜಿ ವಿಧಾಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಅನಿಲ್ ಧಿಮಾನ್ ಅವರು ಜಯ ಸಾಧಿಸಿದ್ದಾರೆ.
ಕಳೆದ ಭಾನುವಾರ ಕರ್ನಾಟಕ ಸೇರಿದಂತೆ ಏಳು ರಾಜ್ಯಗಳ 9 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆದಿತ್ತು. ಈ ಪೈಕಿ ಕರ್ನಾಟಕದ ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಹಾಗೂ ಪಶ್ಚಿಮ ಬಂಗಾಳದ ಒಂದು ಕ್ಷೇತ್ರದಲ್ಲಿ ತೃಣಮೂಲ ಕಾಂಗ್ರೆಸ್ ಗೆಲುವು ಸಾಧಿಸಿದೆ.
SCROLL FOR NEXT