ದೇಶ

ಇವಿಎಂ ತಿರುಚಿದ್ದು ನಿಜವಾಗಿದ್ದರೆ, ನಾನು ಅಧಿಕಾರದಲ್ಲಿ ಇರುತ್ತಿರಲಿಲ್ಲ: ಪಂಜಾಬ್ ಸಿಎಂ ಅಮರೀಂದರ್ ಸಿಂಗ್

Manjula VN
ನವದೆಹಲಿ: ಇವಿಎಂ (ವಿದ್ಯುನ್ಮಾನ ಮತಯಂತ್ರ) ತಿರುಚಿರುವುದು ನಿಜವಾಗಿದ್ದರೆ, ನಾನು ಪಂಜಾಬ್ ನಲ್ಲಿ ಅಧಿಕಾರಕ್ಕೇರಲು ಸಾಧ್ಯವಾಗುತ್ತಿರಲಿಲ್ಲ ಎಂದು ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಅವರು ಬುಧವಾರ ಹೇಳಿದ್ದಾರೆ. 
ಇವಿಎಂ ಗೋಲ್ ಮಾಲ್ ಪ್ರಕರಣ ಸಂಬಂಧ ತೀವ್ರವಾಗಿ ವಿರೋಧ ವ್ಯಕ್ತಪಡಿಸುತ್ತಿರುವ ಕಾಂಗ್ರೆಸ್ ನಾಯಕರು ನಿನ್ನೆಯಷ್ಟೇ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರನ್ನು ಭೇಟಿಯಾಗಿ ಬಿಜೆಪಿ ವಿರುದ್ಧ ದೂರು ನೀಡಿತ್ತು. 
ಇದರ ಬೆನ್ನಲ್ಲೇ, ಅಮರೀಂದರ್ ಸಿಂಗ್ ಅವರು ಹೇಳಿಕೆಯನ್ನು ನೀಡಿದ್ದು, ಕಾಂಗ್ರೆಸ್ ನಾಯಕರ ಕಣ್ಣು ಕೆಂಪಗಾಗುವಂತೆ ಮಾಡಿದೆ. 
ಇವಿಎಂ ದೋಷ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅಮರೀಂದರ್ ಸಿಂಗ್ ಅವರು, ಇವಿಎಂ ತಿರುಚಿರುವುದು ನಿಜವಾಗಿದ್ದರೆ, ನಾನು ಅಧಿಕಾರಕ್ಕೇರಲು ಸಾಧ್ಯವಾಗುತ್ತಿರಲಿಲ್ಲ. ಅಕಾಲಿ ಗೆಲವು ಸಾಧಿಸಲು ಸಾಧ್ಯವಾಗುತ್ತಿರಲಿಲ್ಲ ಎಂದು ತಿಳಿಸಿದ್ದಾರೆ. 
SCROLL FOR NEXT