ಫಾರೂಖ್ ಅಬ್ದುಲ್ಲಾ ಅಗ್ಗದ ಜನಪ್ರಿಯತೆಗಾಗಿ ಕಲ್ಲು ತೂರಾಟಗಾರರ ಜೊತೆ ಸೇರಿದ್ದಾರೆ: ಸುಬ್ರಮಣಿಯನ್ ಸ್ವಾಮಿ
ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಖ್ ಅಬ್ದುಲ್ಲಾ ಅಗ್ಗದ ಪ್ರಚಾರಕ್ಕಾಗಿ ಕೆಲ ಕಲ್ಲು ತೂರಾಟಗಾರರ ಜೊತೆ ಸೇರಿಕೊಂಡಿದ್ದಾರೆ ಎಂದು ಬಿಜೆಪಿ ಸಂಸದ ..
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಖ್ ಅಬ್ದುಲ್ಲಾ ಅಗ್ಗದ ಪ್ರಚಾರಕ್ಕಾಗಿ ಕೆಲ ಕಲ್ಲು ತೂರಾಟಗಾರರ ಜೊತೆ ಸೇರಿಕೊಂಡಿದ್ದಾರೆ ಎಂದು ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಆರೋಪಿಸಿದ್ದಾರೆ.
ನ್ಯಾಷನಲ್ ಕಾನ್ಫರೆನ್ಸ್ ಮುಖಂಡ ಫಾರೂಖ್ ಅಬ್ದುಲ್ಲಾ ಮತ್ತು ಓಮರ್ ಅಬ್ದುಲ್ಲಾ ಸದಾ ಸುದ್ದಿಯಲ್ಲಿರಬೇಕೆಂಬ ಬಯಕೆಯಿಂದಾಗಿ ಉಗ್ರರ ಜೊತೆ ಕೈ ಜೋಡಿಸಿದ್ದಾರೆ ಎಂದು ದೂರಿದ್ದಾರೆ.
ಈ ಇಬ್ಬರನ್ನು ಒಪ್ಪಿಕೊಳ್ಳುವುದು ಕಾಶ್ಮೀರದ ಜನತೆಗೆ ಕಷ್ಟವಾಗಿದೆ ಎಂದು ತಿಳಿಸಿರುವ ಅವರು ಪ್ರಚಾರ ಪಡೆಯಲು ಬೇರೆ ದಾರಿಯಿಲ್ಲದ ಕಾರಣ ಉಗ್ರರ ಜೊತೆ ಸೇರಿಕೊಂಡಿದ್ದಾರೆ ಎಂದು ಹೇಳಿದ್ದಾರೆ.
ಸದ್ಯದ ಪರಿಸ್ಥಿತಿಯಲ್ಲಿ ಕಾಶ್ಮೀರದಲ್ಲಿರುವ ಮುಸ್ಲಿಮರು ಬದಲಾಗಲು ಅಥವಾ ದೇಶ ಭಕ್ತರಾಗಲು ಸಾಧ್ಯವಿಲ್ಲ, ಒಂದು ವೇಳೆ ಅವರು ಬದಲಾಗಲು ಯತ್ನಿಸಿದರೇ ಉಗ್ರಗಾಮಿಗಳು ಅವರನ್ನು ಕೊಲ್ಲುತ್ತಾರೆ ಎಂದು ಹೇಳಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.