ನವದೆಹಲಿ: ಕುಲಭೂಷಣ್ ಜಾಧವ್ ಪ್ರಕರಣದಲ್ಲಿ ಭಾರತ ತನ್ನ ಭತ್ತಳಿಕೆಯಲ್ಲಿರುವ ಎಲ್ಲಾ ಅಸ್ತ್ರಗಳನ್ನೂ ಪ್ರಯೋಗಿಸುತ್ತಿದ್ದು, ಅಮೆರಿಕಾ ಸಹ ಪಾಕಿಸ್ತಾನದ ಮೇಲೆ ಒತ್ತಡ ಹೇರುವಂತೆ ಮಾಡುತ್ತಿದೆ.
ಅಮೆರಿಕಾ ರಾಷ್ಟ್ರೀಯ ಭದ್ರತಾ ಸಲಹೆಗಾರ(ಎನ್ಎಸ್ಎ) ವಾರಾಂತ್ಯಕ್ಕೆ ಭಾರತಕ್ಕೆ ಆಗಮಿಸಲಿದ್ದು, ಪ್ರಧಾನಿ ನರೇಂದ್ರ ಮೋದಿ, ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್, ವಿದೇಶಾಂಗ ಇಲಾಖೆ ಕಾರ್ಯದರ್ಶಿ ಎಸ್ ಜೈಶಂಕರ್, ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರನ್ನು ಭೇಟಿ ಮಾಡಲಿದ್ದಾರೆ. ಈ ವೇಳೆ ಅಜಿತ್ ದೋವಲ್ ಪಾಕಿಸ್ತಾನ ಭಾರತದ ನೌಕಾಪಡೆ ಕುಲಭೂಷಣ್ ಜಾಧವ್ ಗೆ ಗಲ್ಲು ಶಿಕ್ಷೆ ವಿಧಿಸಿರುವ ಪ್ರಕರಣದ ಬಗ್ಗೆ ಪ್ರಸ್ತಾಪಿಸಲಿದ್ದಾರೆ.
ಆದರೆ ವಿದೇಶಾಂಗ ಇಲಾಖೆ ವಕ್ತಾರ ಗೋಪಾಲ್ ಬಾಗ್ಲೇ ಭಾರತ ಸರ್ಕಾರ ಕುಲಭೂಷಣ್ ಜಾಧವ್ ಪ್ರಕರಣವನ್ನು ಅಮೆರಿಕಾದೊಂದಿಗೆ ಪ್ರಸ್ತಾಪಿಸುವ ಬಗ್ಗೆ ಮಾಹಿತಿ ಇಲ್ಲ ಎಂದಿದ್ದು, ಕುಲಭೂಷಣ್ ಜಾಧವ್ ಪ್ರಕರಣದಲ್ಲಿ ಸಾಧ್ಯವಿರುವ ಎಲ್ಲವನ್ನೂ ಭಾರತ ಸರ್ಕಾರ ಮಾಡಲಿದೆ, ಬೇರೆ ಬೇರೆ ಆಯ್ಕೆಗಳನ್ನು ಭಾರತ ಸರ್ಕಾರ ಮುಂದಿಟ್ಟುಕೊಂಡಿದೆ ಎಂದು ಹೇಳಿದ್ದಾರೆ. ಪಾಕಿಸ್ತಾನ ಕುಲಭೂಷಣ್ ಜಾಧವ್ ಗೆ ಗಲ್ಲು ಶಿಕ್ಷೆ ವಿಧಿಸಿರುವುದರ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಭಾರತ ಪಾಕಿಸ್ತಾನ ಅಂತಾರಾಷ್ಟ್ರೀಯ ನಿಯಮಗಳನ್ನು ಉಲ್ಲಂಘನೆ ಮಾಡಿದೆ ಎಂದು ಆರೋಪಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics