ಅಜಯ್ ಮಾಕೇನ್ ಮತ್ತು ಶೋಭಾ ಓಜಾ 
ದೇಶ

ಅಜಯ್ ಮಾಕೇನ್, ಶೋಭಾ ಓಜಾ ವಿರುದ್ಧ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ದೂರು

ದೆಹಲಿ ಕಾಂಗ್ರೆಸ್ ಆಂತರಿಕ ಕಲಹ ಬೀದಿಗೆ ಬಿದ್ದಿದೆ. ಪಕ್ಷದ ಹಿರಿಯ ನಾಯಕ ಅಜಯ್‌ ಮಾಕೇನ್‌ ಸೇರಿದಂತೆ ಮೂವರ ವಿರುದ್ಧ ಕಿರುಕುಳದ ದೂರು...

ನವದೆಹಲಿ: ದೆಹಲಿ ಕಾಂಗ್ರೆಸ್ ಆಂತರಿಕ ಕಲಹ ಬೀದಿಗೆ ಬಿದ್ದಿದೆ. ಪಕ್ಷದ ಹಿರಿಯ ನಾಯಕ ಅಜಯ್‌ ಮಾಕೇನ್‌ ಸೇರಿದಂತೆ ಮೂವರ ವಿರುದ್ಧ ಕಿರುಕುಳದ ದೂರು ದಾಖಲಾಗಿದೆ.
ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ರಚನಾ ಸಚ್‌ದೇವಾ ಎ ಮಾಕೇನ್‌ ಮತ್ತು ಹಿರಿಯ ನಾಯಕಿ ಶೋಭಾ ಓಝಾ ಮತ್ತು ನೆಟ್ಟಾ ಡಿ ಸೋಜಾ ವಿರುದ್ಧ ಮಾನಸಿಕ ಕಿರುಕುಳ ನೀಡಿದ ಬಗ್ಗೆ ಆರೋಪ ಮಾಡಿದ್ದಾರೆ.
ದೆಹಲಿ ಮಹಾನಗರ ಪಾಲಿಕೆ ಚುನಾವಣೆಯ ಟಿಕೆಟ್‌ ಹಂಚಿಕೆ ವಿಚಾರದಲ್ಲಿ ರಾಹುಲ್‌ ಗಾಂಧಿ ಅವರ ಭೇಟಿಯಾದ ಕಾರಣಕ್ಕೆ ನನ್ನನ್ನು ಕೋಣೆಯೊಂದರಲ್ಲಿ ಬಂಧಿಯಾಗಿಸಿ  ಕ್ಷಮಾಪಣ ಪತ್ರ ಬರೆಸಲಾಗಿದೆ ಎಂದು ರಚನಾ ಆರೋಪಿಸಿ ತುಘಲಕ್‌ ರಸ್ತೆಯ ಪೊಲೀಸ್‌ ಠಾಣೆಗೆ ಮೂವರ ವಿರುದ್ಧ ದೂರು ನೀಡಿದ್ದಾರೆ. 
ಕಾಂಗ್ರೆಸ್‌ ನಾಯಕರು ತಮ್ಮ ಸಂಬಂಧಿಕರಿಗೆ ಟಿಕೆಟ್‌ ಹಂಚುತ್ತಿದ್ದು ನೈಜ ಕಾಂಗ್ರೆಸ್‌ ಕಾರ್ಯಕರ್ತರಿಗೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿದ್ದಾರೆ.
ಆರೋಪವನ್ನು ತಳ್ಳಿ ಹಾಕಿರುವ ಶೋಭಾ ಓಝಾ ಬಿಜೆಪಿ ಚಿತಾವಣೆಯಲ್ಲಿ  ರಚನಾ ಈ ಆರೋಪ ಮಾಡುತ್ತಿದ್ದಾರೆ ಎಂದಿದ್ದಾರೆ. ಚುನಾವಣೆಯಲ್ಲಿ ಟಿಕೆಟ್ ಗಳನ್ನು ಪಾರದರ್ಶಕವಾಗಿ ನೀಡಲಾಗಿದೆ, ಅಭ್ಯರ್ಥಿಗಳ ಸಾಮರ್ಥ್ಯ ನೋಡಿ ಅವರಿಗೆ ಟಿಕೆಟ್ ನೀಡಲಾಗಿದೆ ಎಂದು ಸ್ಪಷ್ಟ ಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!