ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ನಾಗ್ಪುರ: ಹೊಸ ಶಾಖೋತ್ಪನ್ನ ಘಟಕಗಳನ್ನು ಉದ್ಘಾಟಿಸಿದ ಪ್ರಧಾನಿ ಮೋದಿ

ಒಟ್ಟು 3,230 ಮೆಗಾ ವ್ಯಾಟ್ ಸಾಮರ್ಥ್ಯದ ಶಾಖೋತ್ಪನ್ನ ಸ್ಥಾವರ ಘಟಕಗಳನ್ನು ಪ್ರಧಾನ...

ಶಾಖೋತ್ಪನ್ನ ಸ್ಥಾವರ ಘಟಕಗಳನ್ನು ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ
Sumana Upadhyaya
Updated On : 15 Apr 2017, 10:19 am
ನಾಗ್ಪುರ: ಒಟ್ಟು 3,230 ಮೆಗಾ ವ್ಯಾಟ್ ಸಾಮರ್ಥ್ಯದ ಶಾಖೋತ್ಪನ್ನ ಸ್ಥಾವರ ಘಟಕಗಳನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಶುಕ್ರವಾರ ಮಹಾರಾಷ್ಟ್ರದ ಕೊರಾಡಿ, ಚಂದ್ರಾಪುರ ಮತ್ತು ಪಾರ್ಲಿಯಲ್ಲಿ ಉದ್ಘಾಟಿಸಿದರು.
ಕೊರಾಡಿಯಲ್ಲಿ 660 ಮೆಗಾ ವ್ಯಾಟ್ ಸಾಮರ್ಥ್ಯದ ಮೂರು ಸೂಪರ್ ಕ್ರಿಟಿಕಲ್ ಯೂನಿಟ್ಸ್, ಚಂದ್ರಾಪುರದಲ್ಲಿ ಎರಡು 500 ಮೆಗಾ ವ್ಯಾಟ್ ಸಾಮರ್ಥ್ಯದ ಘಟಕಗಳು ಹಾಗೂ ಪಾರ್ಲಿಯಲ್ಲಿ 250 ಮೆಗಾವ್ಯಾಟ್ ಘಟಕದ ಘಟಕವನ್ನು ಒಳಗೊಂಡಿದೆ.
ಇದೇ ಸಂದರ್ಭದಲ್ಲಿ ಪ್ರಧಾನಿ ಗೌತಮ ಬುದ್ಧ, ಡಾ.ಬಿ.ಆರ್.ಅಂಬೇಡ್ಕರ್ ಮ್ತತು ದೀಕ್ಷಭೂಮಿಯನ್ನು ಬಿಂಬಿಸುವ ಎರಡು ವಿಶೇಷ ಸ್ಮರಣಾರ್ಥ ಅಂಚೆಚೀಟಿಗಳನ್ನು ಬಿಡುಗಡೆ ಮಾಡಿದರು. 5 ರೂಪಾಯಿ ಮುಖಬೆಲೆಯನ್ನು ಅಂಚೆಚೀಟಿಗಳು ಒಳಗೊಂಡಿವೆ.

Advertisement

Advertisement

ಮಹಾರಾಷ್ಟ್ರ ರಾಜ್ಯಪಾಲ ವಿದ್ಯಾಸಾಗರ್ ರಾವ್, ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ, ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವದೇಕರ್ ಮೊದಲಾದವರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments