ಲಕ್ನೋ: ದೇಶದ ಮಹಾನ್ ನಾಯಕರ ಜನ್ಮ ದಿನಾಚರಣೆಗಳಂದು ಉತ್ತರ ಪ್ರದೇಶ ಶಾಲೆಗಳಲ್ಲಿ ಇನ್ನು ಮುಂದೆ ರಜೆ ಇರುವುದಿಲ್ಲ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಘೋಷಿಸಿದ್ದಾರೆ.
ಡಾ. ಬಿ.ಆರ್. ಅಂಬೇಡ್ಕರ್ ಅವರ 120ನೇ ಜನ್ಮ ದಿನಾಚರಣೆಯಂದು ಪುಷ್ಪನಮನ ಸಲ್ಲಿಸಿ ಮಾತನಾಡಿದ ಯೋಗಿ ಆದಿತ್ಯನಾಥ್ ಮಹಾನ್ ನಾಯಕರ ಜನ್ಮ ದಿನಾಚರಣೆಯಂದು ಶಾಲೆಗಳು ಎಂದಿನಂತೆ ಕಾರ್ಯ ನಿರ್ವಹಿಸುತ್ತವೆ ಎಂದು ಹೇಳಿದ್ದಾರೆ.
ನಾಯಕರುಗಳ ಜನ್ಮ ದಿನಾಚರಣೆಯಂದು ಉತ್ತರ ಪ್ರದೇಶ ಶಾಲೆಗಳಿಗೆ ರಜೆ ಇರುವುದಿಲ್ಲ, ಮಕ್ಕಳು ಆದಿನ ಶಾಲೆಯಲ್ಲಿ ನಾಯಕರುಗಳ ಬಗ್ಗೆ ತಿಳಿದುಕೊಳ್ಳಬೇಕು ಎಂದು ಹೇಳಿದ್ದಾರೆ.
ಇನ್ನು ಭಿಮ್ ಆ್ಯಪ್ ಬಿಡುಗಡೆ ಮಾಡಿದ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯವನ್ನು ಯೋಗಿ ಆದಿತ್ಯನಾಥ್ ಶ್ಲಾಘಿಸಿದರು.