ಪಣಜಿ: ಕಾಶ್ಮೀರ ಸಮಸ್ಯೆಯನ್ನು ಬಗೆಹರಿಸುವುದು ಸುಲಭವಲ್ಲ, ದೀರ್ಘಾವಧಿಯ ನೀತಿಯಷ್ಟೇ ಸಮಸ್ಯೆಯನ್ನು ಬಗೆಹರಿಸಲು ಸಾಧ್ಯ ಎಂದು ಮಾಜಿ ರಕ್ಷಣಾ ಸಚಿವ, ಗೋವಾ ಸಿಎಂ ಮನೋಹರ್ ಪರಿಕ್ಕರ್ ಹೇಳಿದ್ದಾರೆ.
ಬಾಬಾ ಸಾಹೇಬ್ ಅಂಬೇಡ್ಕರ್ ಅವರ 126 ನೇ ಜನ್ಮದಿನಾಚರಣೆಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿರುವ ಮನೋಹರ್ ಪರಿಕ್ಕರ್, ಕಾಶ್ಮೀರ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕಿದ್ದರೆ ಅದಕ್ಕಾಗಿ ದೀರ್ಘಾವಧಿಯ ನೀತಿಯ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಇದೇ ವೇಳೆ ರಕ್ಷಣಾ ಸಚಿವರಾಗಿ ಕಾರ್ಯನಿರ್ವಹಿಸಿದಾಗಿನ ದಿನಗಳ ಬಗ್ಗೆಯೂ ಮಾತನಾಡಿರುವ ಪರಿಕ್ಕರ್ ರಕ್ಷಣಾ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದಾಗ ತಮ್ಮ ಮೇಲೆ ಹೆಚ್ಚು ಒತ್ತಡವಿತ್ತು, ದೆಹಲಿ ತಮಗೆ ರೂಢಿಯಿಲ್ಲದ ಪ್ರದೇಶವಾಗಿತ್ತು ಎಂದು ತಿಳಿಸಿದ್ದಾರೆ.