ಸೆಲ್ಫಿ ಕ್ರೇಜ್: ಚಲಿಸುತ್ತಿದ್ದ ರೈಲಿನಿಂದ ಕೆಳಗೆ ಬಿದ್ದು 3 ವಿದ್ಯಾರ್ಥಿಗಳು ಸಾವು
ಚಲಿಸುತ್ತಿದ್ದ ರೈಲಿನಲ್ಲಿ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಮೂವರು ವಿದ್ಯಾರ್ಥಿಗಳು ದಾರುಣ ಸಾವನ್ನಪ್ಪಿರುವ ಘಟನೆ ಹೌರಾದಲ್ಲಿ ನಡೆದಿದೆ...
ಹೌರಾ(ಪಶ್ಚಿಮ ಬಂಗಾಳ): ಚಲಿಸುತ್ತಿದ್ದ ರೈಲಿನಲ್ಲಿ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಮೂವರು ವಿದ್ಯಾರ್ಥಿಗಳು ದಾರುಣ ಸಾವನ್ನಪ್ಪಿರುವ ಘಟನೆ ಹೌರಾದಲ್ಲಿ ನಡೆದಿದೆ.
ಪಶ್ಚಿಮ ಬಂಗಾಳದ ಬೆಲ್ಲೂರ್ ಮತ್ತು ಲಿಲೂಹಾ ರೈಲ್ವೆ ನಿಲ್ದಾಣದ ಬಳಿ ಈ ದುರ್ಘಟನೆ ನಡೆಸಿದೆ. ಸೆಲ್ಫಿ ತೆಗೆದುಕೊಳ್ಳುವ ಭರದಲ್ಲಿ ವಿದ್ಯಾರ್ಥಿಗಳು ಆಯಾ ತಪ್ಪಿ ಕೆಳಗೆ ಬಿದ್ದಿದ್ದಾರೆ. ಇದರಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದರೇ, ಓರ್ವ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿದ್ದಾನೆ.
ಗಂಭೀರವಾಗಿ ಗಾಯಗೊಂಡಿರುವ ವಿದ್ಯಾರ್ಥಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.