ನರೇಂದ್ರ ಮೋದಿ 
ದೇಶ

ಲಖನೌ ನಲ್ಲಿ ನಡೆಯಲಿರುವ ಯೋಗ ದಿನಾಚರಣೆಯಲ್ಲಿ ಭಾಗಿಯಾಗಲಿರುವ ಪ್ರಧಾನಿ ನರೇಂದ್ರ ಮೋದಿ

ಜೂ.21 ರಂದು ಲಖನೌ ನಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಲಿದ್ದಾರೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಲಖನೌ: ಜೂ.21 ರಂದು ಲಖನೌ ನಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಲಿದ್ದಾರೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ. 
ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಂದು 50,00 ಜನರು ಭಾಗವಹಿಸುವ ನಿರೀಕ್ಷೆ ಇದ್ದು, ಸೂಕ್ತ ತಯಾರಿ ನಡೆಸುವಂತೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಉತ್ತರ ಪ್ರದೇಶ ಮುಖ್ಯ ಕಾರ್ಯದರ್ಶಿ ರಾಹುಲ್ ಭಟ್ನಾಗರ್ ಹೇಳಿದ್ದಾರೆ. 
ವಿವಿಐಪಿ ಭದ್ರತೆ, ಅತಿ ಹೆಚ್ಚು ಜನರು ಭಾಗವಹಿಸುವುದಕ್ಕೆ ಪೂರಕವಾಗಿರುವ ಸ್ಥಳಕ್ಕಾಗಿ ಹುಡುಕಲಾಗುತ್ತಿದೆ. ಈ ನಡುವೆ ಕನಿಷ್ಠ 100 ವಿದ್ಯಾರ್ಥಿಗಳು ಭಾಗಿಯಾಗಬೇಕೆಂದು ಪ್ರೌಢ ಶಿಕ್ಷಣ ಇಲಾಖೆಗೆ ಸೂಚನೆ ರವಾನಿಸಲಾಗಿದೆ. ಹಿರಿಯ ನಾಗರಿಕರು, 400-500  ವಿಕಲ ಚೇತನ ಮಕ್ಕಳು ಭಾಗಿಯಾಗುವುದಕ್ಕೆ ಪೂರಕವಾದ ಸಿದ್ಧತೆಗಳನ್ನೂ ಮಾಡಿಕೊಳ್ಳಲಾಗುತ್ತಿದೆ ಎಂದು ಉತ್ತರ ಪ್ರದೇಶ ಮುಖ್ಯ ಕಾರ್ಯದರ್ಶಿ ತಿಳಿಸಿದ್ದಾರೆ. 
ಜೂ.18-19 ರ ವರೆಗೆ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಪೂರ್ವಾಭ್ಯಾಸ ನಡೆಯಲಿದ್ದು, ಮಿನರಲ್ ವಾಟರ್ ಬಾಟಲ್, ಶೂ, ಬ್ಯಾಗ್, ಟಿ-ಶರ್ಟ್, ಯೋಗಾ ಮ್ಯಾಟ್ ಗಳನ್ನು ಪೂರೈಕೆ ಮಾಡುವುದಕ್ಕೆ ಈಗಾಗಲೇ ಸರ್ಕಾರ ಸೂಚನೆ ನೀಡಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?