ಲಖಿಸರಾಯಿ: ಬಿಹಾರದ ಲಖಿಸರಾಯಿ ಜಿಲ್ಲೆಯಲ್ಲಿ ಶನಿವಾರ ನಕ್ಸಲರು ಓರ್ವ ವ್ಯಕ್ತಿಯನ್ನು ಹತ್ಯೆ ಮಾಡಿದ್ದು, 6ಕ್ಕೂ ಹೆಚ್ಚು ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಶಸ್ತ್ರ ಸಜ್ಜಿತ ನಕ್ಸಲರು ಇಂದು ಬೆಳಗ್ಗೆ ಚನನ್ ಪೊಲೀಸ್ ಠಾಣಾ ವ್ಯಾಪ್ತಿಯ ಬಟ್ನಾಪುರ ಗ್ರಾಮದ ಬಳಿ ಜೆಸಿಬಿಯ ಚಾಲಕನನ್ನು ಹತ್ಯೆ ಮಾಡಿ, ಹಲವು ವಾಹನಗಳಿಗೆ ಬೆಂಕಿ ಹಚ್ಚಿ ಸುಟ್ಟು ಹಾಕಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕುಮಾರ್ ಅವರು ಹೇಳಿದ್ದಾರೆ.
ನಕ್ಸಲರು ಐದು ಲಾರಿ ಹಾಗೂ ಒಂದು ಟ್ರಾಕ್ಟರ್ ಅನ್ನು ಸಂಪೂರ್ಣ ಸುಟ್ಟು ಹಾಕಿದ್ದು, ಜೆಸಿಬಿ ಹಾಗೂ ಒಂದು ದ್ವಿಚಕ್ರ ವಾಹನದ ಮೇಲೆ ಗುಂಡು ಹಾರಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ನಕ್ಸಲರು ಈ ಪ್ರದೇಶದಲ್ಲಿ ಜನರನ್ನು ಹೆದರಿಸಿ ಹಫ್ತಾ ವಸೂಲಿ ಮಾಡುತ್ತಿದ್ದು, ಹಫ್ತಾ ನೀಡದಿರುವುದೇ ಘಟನೆಗೆ ಕಾರಣ ಎಂದು ಅವರು ಅಶೋಕ್ ಕುಮಾರ್ ಹೇಳಿದ್ದಾರೆ.
ಹತ್ಯೆಯಾದ ಜೆಸಿಬಿ ಚಾಲಕ ರಾಜೇಶ್ ಬಿಂದ್(24 ವರ್ಷ) ಎಂದು ಗುರುತಿಸಲಾಗಿದ್ದು, ಎಸ್ಪಿ ಹಾಗೂ ಹೆಚ್ಚುವರಿ ಎಸ್ಪಿ ಇಬ್ಬರೂ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics