ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ 
ದೇಶ

ಕುಮಾರ್ ವಿಶ್ವಾಸ್ ಮೇಲೆ ನನಗೆ ಕೋಪವಿಲ್ಲ: ಅರವಿಂದ್ ಕೇಜ್ರಿವಾಲ್ ಸ್ಪಷ್ಟನೆ

ಆಮ್ ಆದ್ಮಿ ಪಕ್ಷದ ಮುಖಂಡ ಕುಮಾರ್ ವಿಶ್ವಾಮ ಹಾಗೂ ನನ್ನ ಯಾವುದೇ ಯಾವುದೇ ವೈಮನಸ್ಸಿಲ್ಲ, ಕುಮಾರ್ ವಿಶ್ವಾಸ್ ಮನೆಯ ಕುಟುಂಬ ಸದಸ್ಯರಿದ್ದಂತೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಭಾನುವಾರ ಸ್ಪಷ್ಟನೆ ನೀಡಿದ್ದಾರೆ...

ನವದೆಹಲಿ: ಆಮ್ ಆದ್ಮಿ ಪಕ್ಷದ ಮುಖಂಡ ಕುಮಾರ್ ವಿಶ್ವಾಮ ಹಾಗೂ ನನ್ನ ಯಾವುದೇ ಯಾವುದೇ ವೈಮನಸ್ಸಿಲ್ಲ, ಕುಮಾರ್ ವಿಶ್ವಾಸ್ ಮನೆಯ ಕುಟುಂಬ ಸದಸ್ಯರಿದ್ದಂತೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಭಾನುವಾರ ಸ್ಪಷ್ಟನೆ ನೀಡಿದ್ದಾರೆ. 
ಇತ್ತೀಚೆಗೆಷ್ಟೇ ಅರವಿಂದ್ ಕೇಜ್ರಿವಾಲ್ ಟಿವಿಯೊಂದಕ್ಕೆ ನೀಡಿದ್ದ ಸಂದರ್ಶನದ ವಿಡಿಯೋವೊಂದನ್ನು ಕುಮಾರ್ ವಿಶ್ವಾಸ್ ಅವರು ಟ್ವೀಟ್ ಮಾಡಿದ್ದರು. ವಿಡಿಯೋದಿಂದ ಕೇಜ್ರಿವಾಲ್ ಅವರ ಬಗ್ಗೆ ಟೀಕೆಗಳು ಎದುರಾಗಿದ್ದವು. ಹೀಗಾಗಿ ಕೇಜ್ರಿವಾಲ್ ಹಾಗೂ ಕುಮಾರ್ ವಿಶ್ವಾಸ್ ಮಧ್ಯೆ ಬಿರುಕು ಉಂಟಾಗಿದೆ ಎಂಬ ಮಾತುಗಳು ಕೇಳಿಬಂದಿದ್ದವು. 
ಈ ಹಿನ್ನಲೆಯಲ್ಲಿ ಸ್ಪಷ್ಟನೆ ನೀಡಿರುವ ಕೇಜ್ರಿವಾಲ್ ಅವರು, ಕುಮಾರ್ ವಿಶ್ವಾಸ್ ಅವರ ಮೇಲೆ ನನಗೆ ಕೋಪವಿಲ್ಲ. ಕುಮಾರ್ ಅವರು ಪಕ್ಷದ ಸದಸ್ಯನಷ್ಟೇ ಅಲ್ಲ, ಅವರು ನನ್ನ ಮನೆಯ ಸದಸ್ಯನಿದ್ದಂತೆ. ಮಾಧ್ಯಮಗಳು ನಮ್ಮಿಬ್ಬರ ವಿಷಯವಾಗಿ ಇದೇ ರೀತಿ ಚರ್ಚೆ ಮಾಡಿದರೆ, ಇದನ್ನು ನಂಬಿ ಮುಂದೆ ನೀವುಗಳು ನನ್ನ ಪತ್ನಿಯೇ ನನ್ನನ್ನು ಟಾರ್ಗೆಟ್ ಮಾಡುತ್ತಿದ್ದಾಳೆಂದು ಬೇಕಾದರೂ ಹೇಳುವಿರಿ ಎಂದು ಹಾಸ್ಯ ಮಾಡಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್, ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

ಲೆಬನಾನ್ ನಲ್ಲಿ ಇಸ್ರೇಲ್ ಆರ್ಭಟ: ಮನೆಗಳ ಮೇಲೆ ಸ್ಫೋಟಕಗಳಿಂದ ದಾಳಿ; ಹಲವು ಹಳ್ಳಿಗಳು ನಾಮಾವಶೇಷ!

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

SCROLL FOR NEXT