ಸಾಂದರ್ಭಿಕ ಚಿತ್ರ 
ದೇಶ

ಪ್ರೇಮಿಗಳ ಹತ್ಯೆಗೈದು ಕಾಲುವೆಗೆ ಎಸೆದ ದುಷ್ಕರ್ಮಿಗಳು: ಮರ್ಯಾದಾ ಹತ್ಯೆ ಶಂಕೆ

ಪ್ರೇಮಿಗಳಿಬ್ಬರನ್ನು ಹತ್ಯೆ ಮಾಡಿ ಮೃತದೇಹಗಳನ್ನು ಕಾಲುವೆಗೆ ಎಸೆದಿರುವ ಅಮಾನುಷ ಘಟನೆಯೊಂದು ಉತ್ತರಪ್ರದೇಶ ಮುಜಾಫರ್ ನಗರದಲ್ಲಿ ನಡೆದಿದೆ...

ಮುಜಾಫರ್'ನಗರ: ಪ್ರೇಮಿಗಳಿಬ್ಬರನ್ನು ಹತ್ಯೆ ಮಾಡಿ ಮೃತದೇಹಗಳನ್ನು ಕಾಲುವೆಗೆ ಎಸೆದಿರುವ ಅಮಾನುಷ ಘಟನೆಯೊಂದು ಉತ್ತರಪ್ರದೇಶ ಮುಜಾಫರ್ ನಗರದಲ್ಲಿ ನಡೆದಿದೆ. 
17 ವರ್ಷದ ಹದಿಹರೆಯದ ಆಂಚರ್ ಎಂಬ ಯುವತಿ ಅರುಣ್ ಕುಮಾರ್ (18) ಎಂಬಾತನನ್ನು ಪ್ರೀತಿಸುತ್ತಿದ್ದಳು. ಇದು ಯುವತಿಯ ಕುಟುಂಬಕ್ಕೆ ಇಷ್ಟವಿರಲಿಲ್ಲ. ಕುಟುಂಬದ ವಿರೋಧದ ನಡುವೆಯೂ ಯುವತಿ ತನ್ನ ಪ್ರೀತಿಯನ್ನು ಮುಂದುವರೆಸಿದ್ದಕ್ಕೆ ತೀವ್ರವಾಗಿ ಕೆಂಡಾಮಂಡಲ ಕೊಂಡಿರುವ ಯುವತಿಯ ಸಹೋದರ ತನ್ನ ಗೆಳೆಯ ಹಾಗೂ ಮೂವರೊಂದಿಗೆ ಸೇರಿಕೊಂಡು ಪ್ರೇಮಿಗಳಿಬ್ಬರನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ. ಅಲ್ಲದೆ, ಇಬ್ಬರ ಮೃತದೇಹಗಳನ್ನು ಕಾಲುವೆಯೊಂದಕ್ಕೆ ಎಸೆದಿದ್ದಾನೆಂದು ಹಿರಿಯ ಪೊಲೀಸ್ ಅಧಿಕಾರಿ ರಾಜೇಶ್ ಕುಮಾರ್ ಸಿಂಗ್ ಅವರು ಹೇಳಿದ್ದಾರೆ. 
ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಅರುಣ್ ಕುಮಾರ್ ಮೃತದೇಹವನ್ನು ವಶಕ್ಕೆ ಪಡೆಯಲಾಗಿದ್ದು, ಆಂಚರ್ ಮೃತದೇಹಕ್ಕಾಗಿ ಶೋಧಕಾರ್ಯ ನಡೆಸಲಾಗುತ್ತಿದೆ. 
ಪ್ರಕರಣ ಸಂಬಂಧ ಯುವತಿಯ ಸಹೋದರ, ಆತನ ಗೆಳೆಯನನ್ನು ಬಂಧನಕ್ಕೊಳಪಡಿಸಲಾಗಿದೆ. ಮೂವರು ಆರೋಪಿಗಳು ತಲೆಮರೆಸಿಕೊಂಡಿದ್ದು, ಆರೋಪಿಗಳಿಗಾಗಿ ಹುಡುಕಾಟ ಆರಂಭಿಸಲಾಗಿದೆ ಎಂದು ರಾಜೇಶ್ ಅವರು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

CJP protest: ಮಮತಾ ಬ್ಯಾನರ್ಜಿ, ನೇಹಾ ಬೋರಾ, ಯೋಗೇಂದ್ರ ಯಾದವ್ ವಶಕ್ಕೆ ಪಡೆದ ಪೊಲೀಸರು

CEC ಜ್ಞಾನೇಶ್ ಕುಮಾರ್ ವಿರುದ್ಧ ಸಿಜೆಪಿ ಪ್ರತಿಭಟನೆ ವೇಳೆ 2 ಪೊಲೀಸರಿಗೆ ಕಲ್ಲೇಟು!