ಸಂಗ್ರಹ ಚಿತ್ರ 
ದೇಶ

ಫೋರ್ಬ್ಸ್: 30 ವರ್ಷದೊಳಗಿನ ಸಾಧಕರ ಪಟ್ಟಿಯಲ್ಲಿ 50ಕ್ಕೂ ಹೆಚ್ಚು ಭಾರತೀಯರು!

ಖ್ಯಾತ ಅಂತಾರಾಷ್ಟ್ರೀಯ ನಿಯತಕಾಲಿಕೆ ಫೋರ್ಬ್ಸ್ ಬಿಡುಗಡೆ ಮಾಡಿರುವ 30 ವರ್ಷದೊಳಗಿನ ಸಾಧಕರ ಪಟ್ಟಿಯಲ್ಲಿ ಒಲಿಂಪಿಕ್ಸ್ ಸಾಧಕರಾದ ದೀಪಾ ಕರ್ಮಾಕರ್, ಸಾಕ್ಷಿ ಮಲ್ಲಿಕ್ ಸೇರಿದಂತೆ 53 ಭಾರತೀಯರ ಸ್ಥಾನ ಪಡೆದಿದ್ದಾರೆ.

ನವದೆಹಲಿ: ಖ್ಯಾತ ಅಂತಾರಾಷ್ಟ್ರೀಯ ನಿಯತಕಾಲಿಕೆ ಫೋರ್ಬ್ಸ್ ಬಿಡುಗಡೆ ಮಾಡಿರುವ 30 ವರ್ಷದೊಳಗಿನ ಸಾಧಕರ ಪಟ್ಟಿಯಲ್ಲಿ ಒಲಿಂಪಿಕ್ಸ್ ಸಾಧಕರಾದ ದೀಪಾ ಕರ್ಮಾಕರ್, ಸಾಕ್ಷಿ ಮಲ್ಲಿಕ್ ಸೇರಿದಂತೆ 53 ಭಾರತೀಯರ ಸ್ಥಾನ ಪಡೆದಿದ್ದಾರೆ.

ಒಟ್ಟು 10 ವಿಭಾಗಗಳಲ್ಲಿ ಸಾಧಕರನ್ನು ಆಯ್ಕೆ ಮಾಡಲಾಗಿದ್ದು, ಅಂದರೆ ಕ್ರೀಡೆ, ಮನರಂಜನೆ, ಹಣಕಾಸು ಮತ್ತು ಉದ್ಯಮ, ಬಂಡವಾಳ, ಚಿಲ್ಲರೆ, ಸಾಮಾಜಿಕ ಉದ್ಯಮಗಳು ಮತ್ತು ಉದ್ಯಮ ತಂತ್ರಜ್ಞಾನ ಕ್ಷೇತ್ರದಲ್ಲಿ ಸಾಧನೆಗೈದ  ಸಾಧಕಿಯರನ್ನು ಪಟ್ಟಿಯಲ್ಲಿ ಸೇರ್ಪಡೆ ಮಾಡಲಾಗಿದೆ. ಏಷ್ಯಾದ ಒಟ್ಟು 300 ಸಾಧಕರನ್ನು ಪಟ್ಟಿಗೆ ಆಯ್ಕೆ ಮಾಡಲಾಗಿದ್ದು, ಈ ಪೈಕಿ 53 ಸಾಧಕರನ್ನು ಹೊಂದಿರುವ ಭಾರತ 2ನೇ ಸ್ಥಾನದಲ್ಲಿದ್ದರೆ, 76 ಸಾಧಕರನ್ನು ಹೊಂದಿರುವ ಚೀನಾ  ಮೊದಲ ಸ್ಥಾನದಲ್ಲಿದೆ.

ರಿಯೋ ಒಲಿಂಪಿಕ್ಸ್ ನಲ್ಲಿ ಅಂತಿಮ ಘಟ್ಟದವರೆಗೂ ಭಾರತವನ್ನು ಪ್ರತಿನಿಧಿಸಿದ ಮೊದಲ ಮಹಿಳಾ ಸ್ಪರ್ಧಿ ಎಂಬ ಕೀರ್ತಿಗೆ ಭಾಜನರಾಗಿದ್ದ ಜಿಮ್ನಾಸ್ಟ್ ದೀಪಾ ಕರ್ಮಾಕರ್ ಅವರು ಪಟ್ಟಿಯಲ್ಲಿ ಸ್ಥಾನ ಪಡೆದಿದ್ದು, ಕುಸ್ತಿ ವಿಭಾಗದಲ್ಲಿ  ಭಾರತಕ್ಕೆ ಮೊದಲ ಪದಕ ಗೆದ್ದುಕೊಟ್ಟ ರೆಸ್ಲರ್ ಸಾಕ್ಷಿ ಮಲ್ಲಿಕ್ ಕೂಡ ಪಟ್ಟಿಯಲ್ಲಿ ಸ್ಥಾನಪಡೆದಿದ್ದಾರೆ. ಕುಗ್ರಾಮದಲ್ಲಿ ಜನಸಿದ ಮಲ್ಲಿಕ್ ಗ್ರಾಮಸ್ಥರ ವಿರೋಧದ ನಡುವೆಯೇ ಕುಸ್ತಿ ಕಲಿತು ಇದೀಗ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಪದಕ  ಗೆದಿದ್ದಾರೆ ಎಂದು ಬಣ್ಣಿಸಲಾಗಿದೆ.

ಅಂತೆಯೇ ಮನರಂಜನಾ ಕ್ಷೇತ್ರದಿಂದ ನಟಿ ಆಲಿಯಾ ಭಟ್ ಸ್ಥಾನ ಪಡೆದಿದ್ದು, 20ಕ್ಕೂ ಹೆಚ್ಚು ಅಧಿಕ ಗಳಿಕೆ ಕಂಡ ಸಿನಿಮಾಗಳಲ್ಲಿ ಆಲಿಯಾ ಅಭಿನಯಿಸಿದ್ದಾರೆ ಎಂದು ಹೇಳಲಾಗಿದೆ.  ಉಳಿದಂತೆ ಅರ್ಜುನ ಪ್ರಶಸ್ತಿ ವಿಜೇತ ಮತ್ತು 96  ಪದಕಗಳ ವಿಜೇತ ಸ್ವಿಮ್ಮರ್ ಶರತ್ ಗಾಯಕ್ವಾಡ್, ಶೀಸೆ ಸಂಸ್ಥಾಪಕಿ ತ್ರಿಶಾ ಶೆಟ್ಟಿ, ಫೀಡಿಂಗ್ ಇಂಡಿಯಾ ಸಂಸ್ಥೆ ಮೂಲಕ ಹಸಿದವರಿಗೆ ಅನ್ನ ನೀಡುತ್ತಿರುವ ಸಂಸ್ಥೆಯ ಸಂಸ್ಥಾಪಕಿ ಅಂಕಿತ್ ಕವಾತ್ರ, ಗೋಡೈಮೆನ್ಷನ್ ಸಂಸ್ಥಾಪಕ  ಶ್ರವಣ್ ಕುಮಾರನ್ ಸೇರಿದಂತೆ ಒಟ್ಟು 53 ಮಂದಿ ಭಾರತೀಯರು ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

ಮತ ಬೇಟೆ ತಡೆಯಲು 'ಕೈ' ಕಲಿಗಳ ಮಾಸ್ಟರ್ ಪ್ಲ್ಯಾನ್: ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ, ಬೂತ್ ಮಟ್ಟದಲ್ಲಿ ಸಮರಕ್ಕೆ ಸಜ್ಜು..!

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ

ಕೋಟಿ ಕೋಟಿ ಲೂಟಿ: ಅರಣ್ಯ ಇಲಾಖೆ ಮಾಜಿ ಅಧಿಕಾರಿಗೆ ಕೋರ್ಟ್ ಶಾಕ್; ಬರೋಬ್ಬರಿ 1.38 ಕೋಟಿ ದಂಡ, 3 ವರ್ಷ ಜೈಲು ಶಿಕ್ಷೆ..!