ಮುಸ್ಲೀಮರಿಗೆ ಮೀಸಲಾತಿ ಮಸೂದೆ ಒಂದು ರದ್ದಿ ಕಾಗದ: ತೆಲಂಗಾಣ ಬಿಜೆಪಿ
ಮುಸ್ಲಿಮರ ಮೀಸಲಾತಿ ಪ್ರಮಾಣವನ್ನು ಶೇ.4 ರಿಂದ 12ಕ್ಕೆ ಏರಿಕೆ ಮಾಡಿರುವ ತೆಲಂಗಾಣ ಸರ್ಕಾರದ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ.
ಹೈದರಾಬಾದ್: ಮುಸ್ಲಿಮರ ಮೀಸಲಾತಿ ಪ್ರಮಾಣವನ್ನು ಶೇ.4 ರಿಂದ 12ಕ್ಕೆ ಏರಿಕೆ ಮಾಡಿರುವ ತೆಲಂಗಾಣ ಸರ್ಕಾರದ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಮುಸ್ಲಿಮರಿಗೆ ಮೀಸಲಾತಿ ನೀಡಿರುವ ಮಸೂದೆ ಒಂದು ರದ್ದಿ ಕಾಗದ ಎಂದಿದ್ದು ಮಸೂದೆ ತಿರಸ್ಕೃತಗೊಳ್ಳಲಿದೆ ಎಂದು ಹೇಳಿದೆ.
ತೆಲಂಗಾಣ ಸರ್ಕಾರದ ಮಸೂದೆ ಕೇಂದ್ರ ಸರ್ಕಾರದ ಮಟ್ಟದಲ್ಲಿ ರದ್ದುಗೊಳ್ಳಲಿದೆ ಎಂದಿರುವ ಬಿಜೆಪಿ, ತೆಲಂಗಾಣದಲ್ಲಿ ತನ್ನ ಸಂಘಟನೆಯನ್ನು ಬಲಪಡಿಸಿಕೊಳ್ಳಲು ಈ ವಿಷಯವನ್ನು ಸಮರ್ಥವಾಗಿ ಬಳಸಿಕೊಳ್ಳುವ ಸೂಚನೆಯನ್ನೂ ನೀಡಿದ್ದು, ಟಿಆರ್ ಎಸ್ ವಿರುದ್ಧ ಹೋರಾಟ ಮಾಡುವುದಾಗಿ ಹೇಳಿದೆ.
ಮುಸ್ಲಿಮರಿಗೆ ಮೀಸಲಾತಿ ಹೆಚ್ಚಿಸುವುದಕ್ಕೆ ಕಾನೂನು ಮಾನ್ಯತೆ ಇಲ್ಲ ಕೇಂದ್ರ ಸರ್ಕಾರದ ಮಟ್ಟದಲ್ಲಿ ಅದು ರದ್ದುಗೊಳ್ಳಲಿದೆ ಎಂದು ತೆಲಂಗಾಣ ಬಿಜೆಪಿಯ ವಕ್ತಾರ ಕೃಷ್ಣ ಸಾಗರ್ ರಾವ್ ಹೇಳಿದ್ದಾರೆ. ಧರ್ಮಾಧಾರಿತ ಮೀಸಲಾತಿಗೆ ಅವಕಾಶವಿಲ್ಲ, ಹೈಕೋರ್ಟ್, ಸುಪ್ರೀಂ ಕೋರ್ಟ್ ಮೀಸಲಾತಿಯನ್ನು ಶೇ.50ಕ್ಕೆ ನಿಗದಿಪಡಿಸಿರುವುದರಿಂದ ತೆಲಂಗಾಣ ಸರ್ಕಾರದ ನಿರ್ಧಾರಕ್ಕೆ ಕಾನೂನು ಮಾನ್ಯತೆ ಸಿಗುವುದಿಲ್ಲ. ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ರಾಜ್ಯ ಬಿಜೆಪಿ ಕೋರ್ಟ್ ಮೊರೆ ಹೋಗುವುದಾಗಿ ಎಂದು ಕೃಷ್ಣ ಸಾಗರ್ ರಾವ್ ಹೇಳಿದ್ದಾರೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.