ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಅಧಿಕಾರದಲ್ಲಿದ್ದ ಮಾತ್ರಕ್ಕೆ ಸತ್ಯವನ್ನು ಸೋಲಿಸಲು ಸಾಧ್ಯವಿಲ್ಲ: ರಾಹುಲ್ ಗಾಂಧಿ

ಪ್ರಧಾನಿ ನರೇಂದ್ರ ಮೋದಿ ಅವರು ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅಧಿಕಾರದಲ್ಲಿರುವವರು ಭಯದ ವಾತಾವರಣ ನಿರ್ಮಾಣ ಮಾಡಬಹುದೇ...

ರಾಹುಲ್ ಗಾಂಧಿ
Vishwanath S
Updated On : 17 Apr 2017, 4:20 am
ಪಾಟ್ನಾ: ಪ್ರಧಾನಿ ನರೇಂದ್ರ ಮೋದಿ ಅವರು ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅಧಿಕಾರದಲ್ಲಿರುವವರು ಭಯದ ವಾತಾವರಣ ನಿರ್ಮಾಣ ಮಾಡಬಹುದೇ ಹೊರತು ಸತ್ಯವನ್ನು ಸೋಲಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. 
ರಾಷ್ಟ್ರಪಿತ ಮಹಾತ್ಮಾ ಗಾಂಧಿಜೀ ಅವರು ಸ್ವಾತಂತ್ರ್ಯ ಪೂರ್ವದಲ್ಲೇ ಚಂಪಾರಣ್ಯ ಸತ್ಯಾಗ್ರಹ ಮಾಡುವ ಮೂಲಕ ಇದನ್ನು ಸಾಬೀತು ಪಡಿಸಿದ್ದಾರೆ. ಅಧಿಕಾರದಲ್ಲಿದ್ದವರು ಯಾವಾಗಲು ಸರಿಯಾಗಿರುತ್ತಾರೆ ಎಂದು ತಿಳಿಯಲು ಸಾಧ್ಯವಿಲ್ಲ ಎಂದ ರಾಹುಲ್, ಬ್ರಿಟಿಷರು ನಮ್ಮನ್ನು ವಶಪಡಿಸಿಕೊಳ್ಳಲು ಏನು ಕಾರಣ? ನಮ್ಮಲ್ಲಿನ ಭಯ. ಆದರೆ ಇದಕ್ಕೆಲ್ಲಾ ಸೆಡ್ಡು ಹೊಡೆದು ಮಹಾತ್ಮಾ ಗಾಂಧಿಜೀ ಅವರು ಚಂಪಾರಣ್ಯ ಸತ್ಯಾಗ್ರಹ ಶುರು ಮಾಡಿ ಜನರಿಗೆ ಭಯಪಡದಂತೆ ತಿಳಿ ಹೇಳಿದರು. ಜತೆಗೆ ಅಧಿಕಾರದ ವಿರುದ್ಧ ಹೋರಾಡುವಂತೆ ಮಾಡಿದರು ಕೊನೆಗೆ ಸತ್ಯಕ್ಕೆ ಜಯ ಸಂದಿತು ಎಂದರು. 
ನಮ್ಮ ದೇಶದ ಜನರಿಗೆ ಸತ್ಯ ಎನೆಂಬುದು ತಿಳಿದಿದೆ. ಹೀಗಾಗಿ ಅಧಿಕಾರದಲ್ಲಿರುವವರು ಏನು ಹೇಳಿದರು ಅದನ್ನು ಒಪ್ಪಿಕೊಳ್ಳುವುದಿಲ್ಲ. ದೇಶದಲ್ಲಿ ಯಾರೇ ಅಧಿಕಾರದಲ್ಲಿದ್ದರು ದೇಶವನ್ನು ವಿಭಜಿಸಲು ಯತ್ನಿಸುತ್ತಾರೆ. ಭಯದ ವಾತಾವರಣ ಹುಟ್ಟು ಹಾಕಲು ಯತ್ನಿಸುತ್ತಾರೆ. ಆದರೆ ಇದು ಎಂದೆಂದಿಗೂ ನಡೆಯುವುದಿಲ್ಲ ಎಂದು ರಾಹುಲ್ ಗಾಂಧಿ ಪರೋಕ್ಷವಾಗಿ ಪ್ರಧಾನಿ ಮೋದಿ ಅವರು ವಾಗ್ದಾಳಿ ನಡೆಸಿದರು. 

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments