ಸಂಗ್ರಹ ಚಿತ್ರ 
ದೇಶ

ಸೇನಾ ವಾಹನಕ್ಕೆ ಪ್ರತಿಭಟನಾಕಾರನ ಕಟ್ಟಿದ ಪ್ರಕರಣ: ಸೇನೆ ವಿರುದ್ಧ ಎಫ್ ಐಆರ್ ದಾಖಲು!

ಪ್ರತಿಭಟನಾಕಾರನೋರ್ವನನ್ನು ಸೇನಾವಾಹನಕ್ಕೆ ಕಟ್ಟಿ ಮಾನವ ಗುರಾಣಿಯಾಗಿ ಬಳಕೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಭಾರತೀಯ ಸೇನೆ ವಿರುದ್ಧ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ.

ಶ್ರೀನಗರ: ಹಿಂಸಾಚಾರ ಪೀಡಿತ ಕಾಶ್ಮೀರದಲ್ಲಿ ಸೈನಿಕರು ಮತ್ತು ಪ್ರತಿಭಟನಾಕಾರರ ಸಂಘರ್ಷ ತಾರಕಕ್ಕೇರಿದ್ದ ಬೆನ್ನಲ್ಲೇ ಪ್ರತಿಭಟನಾಕಾರನೋರ್ವನನ್ನು ಸೇನಾವಾಹನಕ್ಕೆ ಕಟ್ಟಿ ಮಾನವ ಗುರಾಣಿಯಾಗಿ ಬಳಕೆ ಮಾಡಿದ  ಆರೋಪಕ್ಕೆ ಸಂಬಂಧಿಸಿದಂತೆ ಭಾರತೀಯ ಸೇನೆ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ.

ಕಳೆದ ಎರಡು ದಿನಗಳ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಿದಾಡಿದ್ದ ಈ ವಿಡಿಯೋಗೆ ಸಂಬಂಧಿಸಿದಂತೆ ಇದೀಗ ಶ್ರೀನಗರ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ. ಕಾಶ್ಮೀರದ ಯುವಕನೊಬ್ಬನನ್ನು ಸೇನೆಯ  ಜೀಪಿನ ಬಾನೆಟ್‌ ಗೆ ಕಟ್ಟಿ ಮಾನವ ತಡೆಗೋಡೆಯಾಗಿ ಬಳಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸೇನೆಯ ವಿರುದ್ಧ ಎಫ್‌ ಐಆರ್‌ ದಾಖಲಿಸಿಕೊಂಡಿದ್ದಾರೆ. ವ್ಯಕ್ತಿಯನ್ನು ಜೀಪಿಗೆ ಕಟ್ಟಿದ್ದ ವಿಡಿಯೋ ಸಾಮಾಜಿಕ  ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿತ್ತು.

ಅಲ್ಲದೆ ಈ ಕೃತ್ಯವನ್ನು ಯೋಧರೇ ಮಾಡಿದ್ದು ಎಂದು ಆರೋಪಿಸಿ ಯೋಧರ ವಿರುದ್ಧ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಈ ವಿಚಾರ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದಂತೆಯೇ ಜಮ್ಮು ಮತ್ತು ಕಾಶ್ಮೀರ ಸಿಎಂ ಮುಫ್ತಿ ಮೆಹಬೂಬ  ಅವರು ಪೊಲೀಸರಿಂದ ವರದಿ ಕೇಳಿದ್ದರು. ಅಂತೆಯೇ ಭಾರತೀಯ ಸೇನೆ ಕೂಡ ಆಂತರಿಕ ತನಿಖೆಗೆ ಆದೇಶ ನೀಡಿತ್ತು. ಇನ್ನು ಈ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಗೃಹ ಸಚಿವ ರಾಜ್ ನಾಥ್ ಸಿಂಗ್ ಅವರು  ಈ ಬಗ್ಗೆ ಪರಿಶೀಲನೆ ನಡೆಸುವುದಾಗಿ ತಿಳಿಸಿದ್ದರು.

ಇನ್ನು ಭಾರತೀಯ ಸೇನೆ ವಿರುದ್ಧ ದಾಖಲಾಗಿರುವ ಎಫ್ ಐಆರ್ ನಲ್ಲಿ ವ್ಯಕ್ತಿಯ ಅಪಹರಣ ಮತ್ತು ಆತನ ಪ್ರಾಣಕ್ಕೆ ಹಾನಿ ತಂದೊಡ್ಡಿದ ಕುರಿತು ದೂರು ದಾಖಲಿಸಿಕೊಳ್ಳಲಾಗಿದೆ.

ಇದೇ ಏಪ್ರಿಲ್ 9ರಿಂದ ಕಾಶ್ಮೀರದಲ್ಲಿ ಮತ್ತೆ ಹಿಂಸಾಚಾರ ಭುಗೆಲೆದಿದ್ದು, ಕಣಿವೆ ರಾಜ್ಯದಲ್ಲಿ ಅಡಗಿದ್ದ ಉಗ್ರರಿಗಾಗಿ ಸೇನಾಪಡೆಯ ಯೋಧರು ಕಾರ್ಯಾಚರಣೆ ನಡೆಸುತ್ತಿದ್ದರು. ಈ ವೇಳೆ ಸ್ಥಳೀಯ ಯುವಕರು ಕಾರ್ಯಾಚರಣೆಗೆ  ಅಡ್ಡಿಪಡಿಸಿ ಸೇನೆಯತ್ತ ಕಲ್ಲು ತೂರಾಟ ಮಾಡಿದ್ದರು. ಈ ವೇಳೆ ಲಾಠಿ ಪ್ರಹಾರ ಕೂಡ ನಡೆದಿತ್ತು. ಅಂದಿನಿಂದ ಕಾಶ್ನೀರದಲ್ಲಿ ಸೇನಾಪಡೆಗಳ ವಿರುದ್ಧ ವ್ಯಾಪಕ ಹಿಂಸಾಚಾರ ನಡೆಯುತ್ತಿದೆ. ಇತ್ತೀಚೆಗಷ್ಟೇ ಯೋಧನೋರ್ವನನ್ನು  ಸ್ಥಳೀಯರು ಥಳಿಸಿದ್ದ ವಿಡಿಯೋ ಕೂಡ ವೈರಲ್ ಆಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ

'ನನ್ನ ಜೊತೆ ಮಲಗಿದ್ರೆ ಸಿನಿಮಾ ಅವಕಾಶ’: ಚಿಕ್ಕ ವಯಸ್ಸಿಗೆ ಚಿತ್ರರಂಗ ಬಿಟ್ಟಿದ್ದೇಕೆ; ಸೌಥ್ ನಿರ್ದೇಶಕನ ಬಗ್ಗೆ ನಟಿ ಶಾಕಿಂಗ್ ಹೇಳಿಕೆ!

3 ಬಾರಿ ಸಿಎಂ ಕೂಡ ಸುರಕ್ಷಿತವಾಗಿಲ್ಲ: ಮಮತಾ ಬ್ಯಾನರ್ಜಿ ಮೇಲೆ ಚಾಕುವಿನಿಂದ ದಾಳಿಗೆ ಯತ್ನ; ಮಹಿಳೆ ಬಂಧನ

ವಿಚಿತ್ರವಾದ್ರೂ ಸತ್ಯ: ಅಪ್ರಾಪ್ತೆಯನ್ನು ಹಿಂಬಾಲಿಸಿ ಲೈಂಗಿಕ ದೌರ್ಜನ್ಯ; ರೋಬೋಟ್ ವಶಕ್ಕೆ ಪಡೆದ ಪೊಲೀಸರು!

'ಏನೇನ್ ದಾಖಲೆ ಇದೆ ಎಲ್ಲಾ ತರಿಸುತ್ತೇನೆ': HDK 'ಸ್ಟಿಂಗ್' ಆರೋಪಕ್ಕೆ CM ಡಿಕೆಶಿ ಶಾಕಿಂಗ್ ರಿಯಾಕ್ಷನ್!