ಸೇನಾ ಸಿಬ್ಬಂದಿಗಳ ಮೇಲೆ ಕಲ್ಲು ತೂರಾಟ 
ದೇಶ

ಗಾಳಿಯಲ್ಲಿ ಗುಂಡು ಹಾರಿಸಬೇಕಾದರೆ ಶ್ರೀನಗರದ ಯುವಕ ಮೃತಪಟ್ಟಿದ್ದಾನೆ: ಬಿಎಸ್ಎಫ್

ಕಾಶ್ಮೀರದಲ್ಲಿ ಸೇನಾ ಸಿಬ್ಬಂದಿಗಳ ಗುಂಡಿಗೆ ಯುವಕನೋರ್ವ ಬಲಿಯಾದ ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗಡಿ ಭದ್ರತಾ ಪಡೆ (ಬಿಎಸ್ಎಫ್), ಗಾಳಿಯಲ್ಲಿ ಗುಂಡು ಹಾರಿಸಬೇಕಾದರೆ ಶ್ರೀನಗರದ ಯುವಕನ ಸಾವು

ಶ್ರೀನಗರ: ಕಾಶ್ಮೀರದಲ್ಲಿ ಸೇನಾ ಸಿಬ್ಬಂದಿಗಳ ಗುಂಡಿಗೆ ಯುವಕನೋರ್ವ ಬಲಿಯಾದ ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗಡಿ ಭದ್ರತಾ ಪಡೆ (ಬಿಎಸ್ಎಫ್), ಗಾಳಿಯಲ್ಲಿ ಗುಂಡು ಹಾರಿಸಬೇಕಾದರೆ ಶ್ರೀನಗರದ ಯುವಕನ ಸಾವು ಸಂಭವಿಸಿದೆ ಎಂದು ಸ್ಪಷ್ಟನೆ ನೀಡಿದೆ. 
ಬಟ್ಮಲೂ ಪ್ರದೇಶದಲ್ಲಿ ಕಾಶ್ಮೀರಿ ಪುಂಡರು ಸೇನಾ ಸಿಬ್ಬಂದಿಗಳ ಮೇಲೆ ತೀವ್ರವಾಗಿ ಕಲ್ಲುತೂರಾಟ ನಡೆಸುತ್ತಿದ್ದರು. ಅಷ್ಟೇ ಅಲ್ಲದೇ ಈ ಪೈಕಿ ಕೆಲವರು ಸೇನಾ ಸಿಬ್ಬಂದಿಗಳ ಸರ್ವೀಸ್ ರೈಫಲ್ ನ್ನು ಕಸಿದುಕೊಳ್ಳಲು ಯತ್ನಿಸಿದ್ದರು. ಈ ಹಿನ್ನೆಲೆಯಲ್ಲಿ ಸೇನಾ ಸಿಬ್ಬಂದಿಗಳು ರಕ್ಷಣೆಗಾಗಿ ಗಾಳಿಯಲ್ಲಿ ಗುಂಡು ಹಾರಿಸಬೇಕಾಯಿತು. ಈ ವೇಳೆ ಆಕಸ್ಮಿಕವಾಗಿ ಶ್ರೀನಗರದ ಯುವಕ ಮೃತಪಟ್ಟಿದ್ದಾನೆ ಎಂದು ಬಿಎಸ್ಎಫ್ ಹೇಳಿದೆ. 
ಘಟನೆ ಕುರಿತ ಪೊಲೀಸ್ ತನಿಖೆಗೆ ಸಹಕಾರ ನೀಡುವುದಾಗಿ ಬಿಎಸ್ ಎಫ್ ಭರವಸೆ ನೀಡಿದೆ. ಸೇನಾ ಸಿಬ್ಬಂದಿಗಳ ಸರ್ವೀಸ್ ರೈಫಲ್ ನ್ನು ಕಸಿದುಕೊಳ್ಳಲು ಯತ್ನಿಸಿದವರನ್ನು ಚದುರಿಸಲು ಅನಿವಾರ್ಯವಾಗಿ ಗಾಳಿಯಲ್ಲಿ ಗುಂಡು ಹಾರಿಸಬೇಕಾಯಿತು. ಆದರೆ ಸೇನಾ ಸಿಬ್ಬಂದಿಗಳಿಗೆ ಯಾರನ್ನೂ ಕೊಲ್ಲುವ ಉದ್ದೇಶ ಇರಲಿಲ್ಲ. ಸಜದ್ ಹಸನ್ ನ ಸಾವಿಗೆ ಕಾರಣವಾದ ಫೈರಿಂಗ್ ಬಗ್ಗೆ ಆಂತರಿಕ ತನಿಖೆಯನ್ನೂ ಪ್ರಾರಂಭಿಸಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಬಿಎಸ್ಎಫ್ ತಿಳಿಸಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವೇನ್ ಮುಚ್ಚೋದು ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ- ಇರಾನ್ ಗೆ ಟ್ರಂಪ್ ಶಾಕ್!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ; Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ, Turkey ಬೇಸ್ತು!

IPL 2026: ಬಟ್ಲರ್ 14,000 ರನ್ ದಾಖಲೆ; ಮಿಂಚಿದ ಶುಭ್ಮನ್ ಗಿಲ್, ಪ್ರಸಿದ್ಧ್ ಕೃಷ್ಣ; LSG ವಿರುದ್ಧ GT ಗೆಲುವು!

US-Iran ಶಾಂತಿ ಮಾತುಕತೆ ವಿಫಲ ಬೆನ್ನಲ್ಲೇ Pakistanಗೆ ಜಾಕ್‌ಪಾಟ್‌: ಕತಾರ್, ಸೌದಿಯಿಂದ 5 ಬಿಲಿಯನ್ ಡಾಲರ್ ಆರ್ಥಿಕ ನೆರವು!

ಶಾಂತಿ ಮಾತುಕತೆ ವಿಫಲ: ಅಮೆರಿಕ ಟೆಹ್ರಾನ್‌ನ ವಿಶ್ವಾಸ ಗಳಿಸಲು ಸಾಧ್ಯವಾಗಲಿಲ್ಲ; ಇರಾನ್ ಸ್ಪೀಕರ್

SCROLL FOR NEXT