ದೆಹಲಿ ಕಾಂಗ್ರೆಸ್ ಮುಖಂಡ ಅರವಿಂದರ್ ಸಿಂಗ್ ಲೌಲಿ ಬಿಜೆಪಿಗೆ ಸೇರ್ಪಡೆ
ನವದೆಹಲಿ: ದೆಹಲಿಯಲ್ಲಿ ಮಹತ್ವದ ರಾಜಕೀಯ ಬೆಳವಣಿಗೆ ನಡೆದಿದ್ದು, ಕಾಂಗ್ರೆಸ್ ನಾಯಕ ಅರವಿಂದರ್ ಸಿಂಗ್ ಲೌಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ದೆಹಲಿ ಬಿಜೆಪಿ ಅಧ್ಯಕ್ಷ ಮನೋಜ್ ತಿವಾರಿ ನೇತೃತ್ವದಲ್ಲಿ ಅರವಿಂದರ್ ಸಿಂಗ್ ಲೌಲಿ ಬಿಜೆಪಿಯ ಪ್ರಾಥಮಿಕ ಸದಸ್ಯತ್ವ ಪಡೆದುಕೊಂಡಿದ್ದಾರೆ. ಕಾಂಗ್ರೆಸ್ ನಾಯಕರಾಗಿದ್ದ ಅರವಿಂದರ್ ಸಿಂಗ್ ಲೌಲಿ ದೆಹಲಿಯ ಅತ್ಯಂತ ಪ್ರಭಾವಿ ನಾಯಕರಾಗಿದ್ದು ಪಂಜಾಬಿ ಸಮುದಾಯದ ಪ್ರತಿನಿಧಿಯಾಗಿದ್ದಾರೆ.
ಎಂಸಿಡಿ ಚುನಾವಣೆಗೆ ಟಿಕೆಟ್ ಹಂಚಿಕೆ ವಿಷಯದಲ್ಲಿ ದೆಹಲಿ ಕಾಂಗ್ರೆಸ್ ನಲ್ಲಿ ಆಂತರಿಕ ಅಸಮಾಧಾನ ಉಂಟಾಗಿರುವ ಹಿನ್ನೆಲೆಯಲ್ಲಿ ಅರವಿಂದರ್ ಸಿಂಗ್ ಲೌಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಕಾಂಗ್ರೆಸ್ ನ ಕಾರ್ಯವೈಖರಿಗೆ ಹಲವು ಹಿರಿಯ ನಾಯಕರು ಅಸಮಾಧಾನಗೊಂಡಿದ್ದು, ಸದ್ಯದಲ್ಲೇ ಅವರೂ ಸಹ ಕಾಂಗ್ರೆಸ್ ತೊರೆಯಲಿದ್ದಾರೆ ಎಂದು ಹೇಳಲಾಗುತ್ತಿದೆ.