ಜಮ್ಮು: ಜಮ್ಮು ಮತ್ತು ಕಾಶ್ಮೀರ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಭಾರತೀಯ ಸೇನೆ ಮೇಲೆ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದ್ದು, ದಾಳಿಯಲ್ಲಿ ಓರ್ವ ಯೋಧ ಹುತಾತ್ಮನಾಗಿದ್ದಾನೆಂದು ಮಂಗಳವಾರ ತಿಳಿದುಬಂದಿದೆ.
ಮೆಂಧಾರ್ ಸೆಕ್ಟರ್'ನ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಈ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಯೋಧ ಹುತಾತ್ಮನಾಗಿದ್ದಾನೆಂದು ಮೂಲಗಳು ತಿಳಿಸಿವೆ.
ರೌಜರಿ ಜಿಲ್ಲೆಯ ನೌಶೆರಾದ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆ ನಿನ್ನೆಯಿಂದಲೂ ಭಾರತೀಯ ಸೇನೆಯನ್ನು ಗುರಿಯಾಗಿರಿಸಿಕೊಂಡು ಮಾರ್ಟರ್ ಲ್ ಹಾಗೂ ಗುಂಡಿನ ದಾಳಿಯನ್ನು ನಡೆಸುತ್ತಲೇ ಇದೆ.
ಮಾರ್ಟರ್ ಶೆಲ್ ಹಾಗೂ ಗುಂಡಿನ ದಾಳಿಗೆ 12 ಕ್ಕೂ ಹೆಚ್ಚು ಸ್ಥಳೀಯ ಜಾನುವಾರುಗಳು ಮೃತಪಟ್ಟಿವೆ. ಪಾಕಿಸ್ತಾನದ ದಾಳಿಗೆ ಭಾರತೀಯ ಸೇನೆ ದಿಟ್ಟ ಉತ್ತರ ನೀಡುತ್ತಿದ್ದು, ಸ್ಥಳದಲ್ಲಿ ಈಗಲೂ ಗುಂಡಿನ ಚಕಮಕಿ ನಡೆಯುತ್ತಿದೆ ಎಂದು ತಿಳಿದುಬಂದಿದೆ.
ನಿನ್ನೆ ಬೆಳಿಗ್ಗೆ 8 ಗಂಟೆಯಿಂದಲೂ ಪಾಕಿಸ್ತಾನ ಸೇನೆ ಭಾರತೀಯ ಸೇನೆ ಮೇಲೆ ಗುಂಡಿನ ದಾಳಿ ಆರಂಭಿಸಿದ್ದು, ಗುಂಡಿನ ಚಕಮಕಿ ಸಂಜೆವರೆಗೂ ಮುಂದುವರೆದಿತ್ತು ಎಂದು ರಕ್ಷಣಾ ಮೂಲಗಳು ತಿಳಿಸಿವೆ.
ದಾಳಿಗೆ ಸೇನೆ ದಿಟ್ಟ ಉತ್ತರ: 8 ಪಾಕ್ ಸೈನಿಕರ ಹತ್ಯೆ
ಅಂತಾರಾಷ್ಟ್ರೀಯ ಗಡಿ ನಿಯಂತ್ರಣ ರೇಖೆ ಬಳಿ ಕದನ ವಿರಾಮ ಉಲ್ಲಂಘಿಸಿ ಪಾಕಿಸ್ತಾನ ಸೈನಿಕರು ನಡೆಸುತ್ತಿದ್ದ ಅಪ್ರಚೋದಿತ ಗುಂಡಿನ ದಾಳಿಗೆ ಭಾರತೀಯ ಸೇನೆ ದಿಟ್ಟ ಉತ್ತರವನ್ನು ನೀಡಿದ್ದು, ಈ ವರೆಗೂ 8 ಮಂದಿ ಪಾಕಿಸ್ತಾನ ಸೈನಿಕರನ್ನು ಹತ್ಯೆ ಮಾಡಿದೆ ಎಂದು ಸೇನಾ ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics