ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್
ನವದೆಹಲಿ: ಜಮ್ಮು ಮತ್ತು ಕಾಶ್ಮೀದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿರುವ ಹಿನ್ನಲೆಯಲ್ಲಿ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹಾಗೂ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರು ಪರಿಸ್ಥಿತಿ ಸೋಮವಾರ ಪರಿಸ್ಥಿತಿ ಅವಲೋಕಿಸಿದ್ದಾರೆ.
ಕಾಶ್ಮೀರ ಹಿಂಸಾಚಾರ ಕುರಿತಂತೆ ನಿನ್ನೆಯಷ್ಟೇ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹಾಗೂ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರ ನೇತೃತ್ವದಲ್ಲಿ ಸಭೆ ನಡೆಸಿದ್ದು, ಸಭೆಯಲ್ಲಿ ಪರಿಸ್ಥಿತಿ ಕುರಿಂತೆ ಅವಲೋಕನ ನಡೆಸಿದ್ದಾರೆಂದು ತಿಳಿದುಬಂದಿದೆ.
ಸಭೆಯಲ್ಲಿ ಉನ್ನತಾಧಿಕಾರಿಗಳು ಕಾಶ್ಮೀರ ಪರಿಸ್ಥಿತಿ ಕುರಿತಂತೆ ವರದಿ ಗಳನ್ನು ನೀಡಿದ್ದಾರೆ. ಅಲ್ಲದೆ, ಪರಿಸ್ಥಿತಿ ನಿಯಂತ್ರಣಕ್ಕೆ ಈಗಾಗಲೇ ತೆಗೆದುಕೊಂಡಿರುವ ಕ್ರಮದ ಕುರಿತಂತೆ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆಂದು ಮೂಲಗಳು ತಿಳಿಸಿವೆ. ಸಭೆಯಲ್ಲಿ ಪ್ರತ್ಯೇಕತಾವಾದಿಗಳ ಜೊತೆಗೆ ಶಾಂತಿಯುತ ಮಾತುಕತೆ ನಡೆಸುವ ಕುರಿತಂತೆಯೂ ಮಾತುಕತೆ ನಡೆಸಲಾಗಿದೆ ಎಂದು ವರದಿಗಳು ತಿಳಿಸಿವೆ.
ಸಂವಿಧಾನದ ಅಡಿಯಲ್ಲಿ ಯಾರೊಂದಿಗೆ ಬೇಕಾದರೂ ಮಾತುಕತೆ ನಡೆಸಲು ಕೇಂದ್ರ ಸರ್ಕಾರ ಸಿದ್ಧವಿದೆ ಎಂದು ಗೃಹ ಸಚಿವ ರಾಜನಾಥ್ ಅವರು ತಿಳಿಸಿದ್ದಾರೆ. ಆದರೆ, ಪ್ರತ್ಯೇಕತಾವಾದಿಗಳು ಮಾತ್ರ ಮಾತುಕತೆಗೆ ನಿರಾಕರಿಸಿದ್ದಾರೆ.
ಕಾಶ್ಮೀರ ಪರಿಸ್ಥಿತಿ ಒಂದೆಡೆ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದ್ದರೆ, ಮತ್ತೊಂದೆಡೆ ರಾಜಕೀಯ ಪಕ್ಷಗಳ ತಿಕ್ಕಾಟ ಕೂಡ ತಾರಕ್ಕೇರತೊಡಗಿವೆ. ಜಮ್ಮು ಮತ್ತು ಕಾಶ್ಮೀರದಲ್ಲಿ ರಾಷ್ಟ್ರಪತಿ ಆಡಳಿತ ಹೇರುವಂತೆ ನ್ಯಾಷನಲ್ ಕಾನ್ಫರೆನ್ಸ್ ನಾಯಕ ಒಮರ್ ಅಬ್ದುಲ್ಲಾ ಆಗ್ರಹಿಸುತ್ತಿದ್ದಾರೆ.
ಪ್ರಸ್ತುತ ರಾಜ್ಯದಲ್ಲಿ ಕತ್ತಲು ಕವಿದಿದ್ದು, ಬೇರೇನೂ ಕಾಣಿಸುತ್ತಿಲ್ಲ. ಕಾಶ್ಮೀರದಲ್ಲಿನ ಪರಿಸ್ಥಿತಿ ನಿಯಂತ್ರಣಕ್ಕೆ ಮೀರಿದೆ. ಕಾಶ್ಮೀರದಲ್ಲಿ ಪರಿಸ್ಥಿತಿ ಈ ಮಟ್ಟಕ್ಕೆ ಹಾಳಾಗಿದ್ದರೂ, ಮೆಹಬೂಬಾ ಮುಫ್ತಿ ಮಾತ್ರ ಮುಖ್ಯಮಂತ್ರಿ ಸ್ಥಾನದಲ್ಲಿ ಕುಳಿತಿದ್ದಾರೆ. ಇದಕ್ಕಿಂತ ನಾಚಿಕೆಗೇಡಿತನ ಬೇರೆಯಿಲ್ಲ ಎಂದು ಹೇಳಿದ್ದಾರೆ.
ಕಾಶ್ಮೀರದಲ್ಲಿ ಪಿಡಿಪಿ-ಬಿಜೆಪಿ ಮೈತ್ರಿ ಪಕ್ಷಗಳು ಅಧಿಕಾರಕ್ಕೆ ಬಂದಾಗಿನಿಂದಲೂ ಪರಿಸ್ಥಿತಿ ಕೈಮೀರಿ ಹೋಗಿದೆ. ವಿನಾಶಕ್ಕಷ್ಟೇ ರಾಜ್ಯ ಸಾಕ್ಷಿಯಾಗಲಿದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics