ನವದೆಹಲಿ: ಚಿತ್ರಮಂದಿರಗಳಲ್ಲಿ ಸಿನಿಮಾ ಪ್ರದರ್ಶನ ಆರಂಭಕ್ಕೆ ಮುನ್ನ ರಾಷ್ಟ್ರಗೀತೆ ಪ್ರಸಾರ ಸಂದರ್ಭದಲ್ಲಿ ಎದ್ದು ನಿಲ್ಲುವುದಕ್ಕೆ ವಿಶೇಷ ಚೇತನರಿಗೆ ಸುಪ್ರೀಂ ಕೋರ್ಟ್ ವಿನಾಯಿತಿ ನೀಡಿದೆ.
ಸುಪ್ರೀಂ ಕೋರ್ಟ್ ತನ್ನ ಮೊದಲ ಆದೇಶದಲ್ಲಿ, ಸಿನಿಮಾ ಮಂದಿರಗಳಿಗೆ ರಾಷ್ಟ್ರಗೀತೆ ಹಾಡುವಾಗ ಪ್ರತಿಯೊಬ್ಬರೂ ಎದ್ದು ನಿಲ್ಲಬೇಕೆಂದು ಆದೇಶ ನೀಡಿತ್ತು.
ವಂದೇ ಮಾತರಂನ್ನು ಎಲ್ಲಾ ಶೈಕ್ಷಣಿಕ ಸಂಸ್ಥೆಗಳಲ್ಲಿ ಹಾಡುವುದನ್ನು ಕಡ್ಡಾಯಗೊಳಿಸುವಂತೆ ಸಲ್ಲಿಸಲಾಗಿದ್ದ ಮನವಿ ಕುರಿತು ಸಹ ನ್ಯಾಯಾಲಯ ಕೇಂದ್ರ ಸರ್ಕಾರಕ್ಕೆ ನೊಟೀಸ್ ಕಳುಹಿಸಿ ಪೂರ್ವ ಸಿದ್ಧತೆ ಮಾಡಿಕೊಳ್ಳಲು 4 ವಾರಗಳ ಕಾಲಾವಕಾಶ ನೀಡಿದೆ. ಅರ್ಜಿಯ ಮುಂದಿನ ವಿಚಾರಣೆ ಆಗಸ್ಟ್ 23ರಂದು ನಡೆಯಲಿದೆ.
ಮಿದುಳು ಲಕ್ವ, ಪಾರ್ಕಿನ್ಸನ್ ರೋಗ, ಸ್ನಾಯು ಕ್ಷಯ ಮತ್ತು ಅಂಗವೈಕಲ್ಯ ಮೊದಲಾದ ಖಾಯಿಲೆಗಳಿಂದ ಬಳಲುತ್ತಿರುವವರು ಮತ್ತು ವಿಶೇಷ ಚೇತನರು ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆ ಸಂದರ್ಭದಲ್ಲಿ ಎದ್ದು ನಿಲ್ಲುವುದಕ್ಕೆ ನ್ಯಾಯಾಲಯ ವಿನಾಯ್ತಿ ನೀಡಿದೆ.