ನವದೆಹಲಿ: ಲಂಡನ್ ನಲ್ಲಿ ವಿಜಯ್ ಮಲ್ಯ ಬಂಧನವಾಗುತ್ತಿದ್ದಂತೆಯೇ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಸಂಸದ ಸುಬ್ರಹ್ಮಣಿಯನ್ ಸ್ವಾಮಿ, ಮುಂದಿನ ಸರದಿ ಐಪಿಎಲ್ ನ ಮಾಜಿ ಆಯುಕ್ತ ಲಲಿತ್ ಮೋದಿ ಅವರದ್ದು ಎಂದು ಹೇಳಿದ್ದಾರೆ.
ಮಲ್ಯ ಬಂಧನವಾಗುತ್ತಿದ್ದಂತೆಯೇ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸುಬ್ರಹ್ಮಣಿಯನ್ ಸ್ವಾಮಿ ಅಭಿನಂದನೆ ಸಲ್ಲಿಸಿರುವ ಬಗ್ಗೆ ವರದಿಗಳು ಪ್ರಕಟವಾಗಿದ್ದು, "ಪ್ರಧಾನಿ ನರೇಂದ್ರ ಮೋದಿ ಅಂದರೆ ಕಟ್ಟುನಿಟ್ಟಿನ ಕರ್ತವ್ಯ ಮಾಡುವ ವ್ಯಕ್ತಿ, ಅವರು ಎಂದಿಗೂ ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸುತ್ತಾರೆ, ಮಲ್ಯಾ ಜೈಲಿಗೆ ಹೋಗುವ ಕಾಲ ಸನ್ನಿಹಿತವಾಗಿದೆ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭಿನಂದನೆ ಸಲ್ಲಿಸಿ ಧನ್ಯವಾದ ತಿಳಿಸಿದ್ದೇನೆ ಎಂದು ಸುಬ್ರಹ್ಮಣಿಯನ್ ಸ್ವಾಮಿ ಹೇಳಿರುವುದನ್ನು ನ್ಯೂಸ್ 18 ವರದಿ ಮಾಡಿದೆ.
ವಿಜಯ್ ಮಲ್ಯ ಬಂಧನ ಕೇವಲ ಆರಂಭವಷ್ಟೇ, ಮುಂದಿನ ದಿನಗಳಲ್ಲಿ ಲಲಿತ್ ಮೊದಿ ಅವರನ್ನು ಬಂಧಿಸಲಾಗುತ್ತದೆ ಎಂದೂ ಸುಬ್ರಹ್ಮಣಿಯನ್ ಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.