ತೇಜ್ ಬಹದ್ದೂರ್ ಯಾದವ್ 
ದೇಶ

ಕಳಪೆ ಆಹಾರ ಪ್ರಶ್ನಿಸಿದ್ದ ಬಿಎಸ್ಎಫ್ ಯೋಧ ತೇಜ್ ಬಹದ್ದೂರ್ ಯಾದವ್ ವಜಾ

ಸೈನಿಕರಿಗೆ ಕಳಪೆ ಗುಣಮಟ್ಟದ ಆಹಾರ ನೀಡಲಾಗುತ್ತಿದೆ ಎಂದು ಆರೋಪಿಸಿದ್ದ ಗಡಿ ರಕ್ಷಣಾ ಪಡೆ(ಬಿಎಸ್​ಎಫ್)ಯ ಯೋಧ ತೇಜ್ ಬಹದ್ದೂರ್...

ನವದೆಹಲಿ: ಸೈನಿಕರಿಗೆ ಕಳಪೆ ಗುಣಮಟ್ಟದ ಆಹಾರ ನೀಡಲಾಗುತ್ತಿದೆ ಎಂದು ಆರೋಪಿಸಿದ್ದ ಗಡಿ ರಕ್ಷಣಾ ಪಡೆ(ಬಿಎಸ್​ಎಫ್)ಯ ಯೋಧ ತೇಜ್ ಬಹದ್ದೂರ್ ಯಾದವ್ ಅವರನ್ನು ಕೆಲಸದಿಂದ ವಜಾಗೊಳಿಸಲಾಗಿದೆ. ಬಂಧಿಸಲಾಗಿದೆ ಎಂದು ಅವರ ಪತ್ನಿ ಆರೋಪಿಸಿದ್ದಾರೆ.
ಕಳಪೆ ಗುಣಮಟ್ಟದ ಆಹಾರದ ಬಗ್ಗೆ ವಿಡಿಯೋ ಮಾಡಿ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದ ತೇಜ್ ಬಹದ್ದೂರ್ ಯಾದವ್ ವಿರುದ್ಧ ತನಿಖೆಯ ನಂತರ ಸೇವೆಯಿಂದ ವಜಾಗೊಳಿಸಲಾಗಿದೆ.
ಸಿಬ್ಬಂದಿ ಕೋರ್ಟ್ ತನಿಖಾ ವರದಿಯನ್ನು ಆಧರಿಸಿ ಯಾದವ್ ಅವರನ್ನು ಕೆಲಸದಿಂದ ತೆಗೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೆ ತೇಜ್ ಬಹದ್ದೂರ್ ಯಾದವ್ ಅವರು ಸೇನೆ ವಿರುದ್ಧ ಸುಳ್ಳು ಆರೋಪ ಮಾಡಿರುವುದು ತನಿಖೆಯ ವೇಳೆ ಪತ್ತೆಯಾಗಿದೆ ಎಂದು ಅವರು ಹೇಳಿದ್ದಾರೆ.
ಕೆಲವು ತಿಂಗಳುಗಳ ಹಿಂದೆ ತೇಜ್ ಬಹದ್ದೂರ್ ಯಾದವ್ ವಿಡಿಯೋ ಒಂದನ್ನು ಮಾಡಿ ಸಾಮಾಜಿಕ ಜಾಲತಾಣಗಳಿಗೆ ಪೋಸ್ಟ್ ಮಾಡಿದ್ದರು. ಈ ವಿಡಿಯೋದಲ್ಲಿ ಸೈನಿಕರಿಗೆ ಪೂರೈಸಲಾಗುತ್ತಿರುವ ಆಹಾರದ ಬಗ್ಗೆ ತೇಜ್ ಬಹದ್ದೂರ್ ಆಕ್ಷೇಪ ವ್ಯಕ್ತಪಡಿಸಿದ್ದರು. ಈ ಕುರಿತು ತನ್ನನ್ನು ಬೆಂಬಲಿಸುವಂತೆ ಪ್ರಧಾನಿ ನರೇಂದ್ರ ಮೋದಿಗೂ ಮನವಿಯನ್ನು ಸಲ್ಲಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!