ನವದೆಹಲಿ: ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ಸಂಬಂಧ ರಾಷ್ಟ್ರೀಯ ಸ್ವಯಂಸೇವಾ ಸಂಘ(ಆರ್ಎಸ್ಎಸ್) ಮತ್ತು ಬಿಜೆಪಿ ನಾಯಕರ ವಿರುದ್ಧ ವಿಚಾರಣೆಗೆ ಸುಪ್ರೀಂಕೋರ್ಟ್ ಗ್ರೀಸ್ ಸಿಗ್ನಲ್ ನೀಡಿರುವುದಕ್ಕೆ ಕಾಂಗ್ರೆಸ್ ಸ್ವಾಗತಿಸಿದೆ.
ಎಲ್.ಕೆ ಅಡ್ವಾಣಿ, ಮುರುಳಿ ಮನೋಹರ್ ಜೋಷಿ ಮತ್ತು ಉಮಾ ಭಾರತಿ ವಿರುದ್ಧ ಕ್ರಮಕೈಗೊಳ್ಳಬೇಕು. ಆಗ ಮಾತ್ರ ಜನರು ಸುಪ್ರೀಂಕೋರ್ಟ್ ಮೇಲೆ ನಂಬಿಕೆ ಕಳೆದುಕೊಳ್ಳುವುದಿಲ್ಲ ಎಂದು ಕಾಂಗ್ರೆಸ್ ಮುಖಂಡ ನಸೀಮ್ ಖಾನ್ ಹೇಳಿದ್ದಾರೆ.
ಎಲ್.ಕೆ ಅಡ್ವಾಣಿ, ಮುರುಳಿ ಮನೋಹರ್ ಜೋಷಿ ಮತ್ತು ಉಮಾ ಭಾರತಿ ಸೇರಿದಂತೆ ಬಿಜೆಪಿ ನಾಯಕರ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಕೇಸ್ ವಿಚಾರಣೆಗೆ ಸುಪ್ರೀಂ ಅಸ್ತು ಎಂದಿದೆ. ಅಲ್ಲದೆ ಲಖನೌ ಹಾಗೂ ರಾಯ್ ಬರೇಲಿಯ ನ್ಯಾಯಾಲಯಗಳಲ್ಲಿ ಪ್ರತ್ಯೇಕ ವಿಚಾರಣೆ ನಡೆಯಬೇಕು, 4 ವಾರಗಳಲ್ಲಿ ವಿಚಾರಣೆ ಪ್ರಾರಂಭವಾಗಿ 2 ವರ್ಷಗಳಲ್ಲಿ ಪ್ರಕರಣದ ವಿಚಾರಣೆ ಮುಕ್ತಾಯಗೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.
ಸುಪ್ರಿಂ ಕೋರ್ಟ್ ನಲ್ಲಿ ಇಂದು ನಡೆದ ವಿಚಾರಣೆಯಲ್ಲಿ ಬಿಜೆಪಿ ಹಿರಿಯ ಮುಖಂಡ ಎಲ್ ಕೆ ಅಡ್ವಾಣಿ ಹಾಗೂ ಜೋಶಿ ಸೇರಿದಂತೆ ಇತರೆ 10 ಮಂದಿ ನಾಯಕರ ವಿರುದ್ಧದ ಕ್ರಿಮಿನಲ್ ಆರೋಪದ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ. ಕರಸೇವಕರೊಂದಿಗೆ 13 ಮಂದಿ ಬಿಜೆಪಿ ನಾಯಕರ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.