ಸಾಂದರ್ಭಿಕ ಚಿತ್ರ 
ದೇಶ

ದೆಹಲಿ: ಕಾಶ್ಮೀರಿ ಗೇಟ್ ಬಳಿ ಅಪಘಾತ- 2 ಸಾವು

ಪಾದಚಾರಿ ಮಾರ್ಗದ ಮೇಲೆ ಮಲಗಿದ್ದ ನಿರಾಶ್ರತರ ಮೇಲೆ ವೇಗವಾಗಿ ಬರುತ್ತಿದ್ದ ಕಾರು ಹರಿದಿದ್ದು, ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿ ಮೂವರಿಗೆ ಗಾಯವಾಗಿರುವ ಘಟನೆ ಕಾಶ್ಮೀರಿ ಗೇಟ್ ಬಳಿ...

ನವದೆಹಲಿ: ಪಾದಚಾರಿ ಮಾರ್ಗದ ಮೇಲೆ ಮಲಗಿದ್ದ ನಿರಾಶ್ರತರ ಮೇಲೆ ವೇಗವಾಗಿ ಬರುತ್ತಿದ್ದ ಕಾರು ಹರಿದಿದ್ದು, ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿ ಮೂವರಿಗೆ ಗಾಯವಾಗಿರುವ ಘಟನೆ ಕಾಶ್ಮೀರಿ ಗೇಟ್ ಬಳಿ ಗುರುವಾರ ನಡೆದಿದೆ. 
ಇಂದು ಮುಂಜಾನೆ 5.30 ಸುಮಾರಿಗೆ ಘಟನೆ ನಡೆದಿದೆ. ದೆಹಲಿ ಪಬ್ಲಿಕ್ ಸ್ಕೂನ್'ನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಅಜಾಗರೂಕತೆಯಿಂದ ಕಾರು ಚಲಾಯಿಸಿದ್ದರಿಂದ ಈ ಘಟನೆ ಸಂಭವಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ, 
ಕಾರು ಚಲಾಯಿಸುತ್ತಿದ್ದ ವಿದ್ಯಾರ್ಥಿ ಬಳಿ ಚಾಲನಾ ಪರವಾನಗಿ ಇರಲಿಲ್ಲ. ಅಪಘಾತ ಸಂಭವಿಸಿದಾಗ ಕಾರಿನಲ್ಲಿ ಆತನೊಂದಿಗೆ ಮತ್ತಿಬ್ಬರು ಸಹಪಾಠಿಗಳು ಕೂಡ ಇದ್ದರು ಎಂದು ಪೊಲೀಸರು ತಿಳಿಸಿದ್ದಾರೆ. 
ವಿದ್ಯಾರ್ಥಿ ಹ್ಯುಂಡಾಯ್ ಐ 20 ಕಾರನ್ನು ಅಡ್ಡಾದಿಡ್ಡಿಯಾಗಿ ಚಾಲನೆ ಮಾಡುತ್ತಿದ್ದ. ಈ ವೇಳೆ ನಿಯಂತ್ರಣ ತಪ್ಪಿದ ಕಾರು ಪಾದಚಾರಿ ಮಾರ್ಗದ ಮೇಲೆ ಬಂದಿದೆ. ನಂತರ ಸ್ಥಳದಲ್ಲಿ ಮಲಗಿದ್ದವರ ಮೇಲೆ ಹರಿದಿತ್ತು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. 
ಗಾಯಾಳುಗಳು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

5 ರಾಜ್ಯಗಳಿಗೆ ರಾಜ್ಯಪಾಲರ ನೇಮಕ; ಇವರೇ ಕರ್ನಾಟಕದ ನೂತನ ರಾಜ್ಯಪಾಲರು...

ವಿಡಿಯೋ ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ಕೋರ್ಟ್ ಮೆಟ್ಟಿಲೇರಿದ ಮಾಜಿ ಮುಖ್ಯಮಂತ್ರಿ!

CM ಡಿಕೆಶಿ​​ ಕುರ್ತಾ ಹಿಡಿದು ಹಿಂದೆ ತಳ್ಳಿದ ರಾಹುಲ್ ಗಾಂಧಿ: ವಿಡಿಯೋ ವೈರಲ್; ಬಂಡೆಗೆ ಸಿಕ್ಕ ಮರ್ಯಾದೆ! ಫುಲ್‌ ಅನ್‌ ರೆಸ್ಪೆಕ್ಟು!

ಕರ್ನಾಟಕ ಸೇರಿ 5 ರಾಜ್ಯಗಳಿಗೆ 2 ದಿನಗಳಲ್ಲಿ ಭಾರೀ ಮಳೆ: IMD ಎಚ್ಚರಿಕೆ

ಸಮರ್ಥರಲ್ಲದಿದ್ದರೆ ಮೊದಲು ನೀವು ರಾಜಿನಾಮೆ ಕೊಡಿ: CJI ಸೂರ್ಯಕಾಂತ್ ರಾಜೀನಾಮೆಗೆ Congress ಒತ್ತಾಯ!