ವೀಸಾ ಕುರಿತು ಯುಎಸ್, ಆಸ್ಟ್ರೇಲಿಯಾ ಸರ್ಕಾರದೊಂದಿಗೆ ಮಾತುಕತೆ ನಡೆಸುತ್ತಿದ್ದೇವೆ: ಭಾರತ
ಅಮೆರಿಕಾ ಹಾಗೂ ಆಸ್ಟ್ರೇಲಿಯಾ ಸರ್ಕಾರಗಳು ವೀಸಾ ಕುರಿತ ನಿಯಮಗಳನ್ನು ಬದಲಾವಣೆ ಮಾಡಿರುವುದರ ಬಗ್ಗೆ ಆತಂಕ ಮೂಡಿದ್ದು, ಅಮೆರಿಕಾ ಹಾಗೂ ಆಸ್ಟ್ರೇಲಿಯಾ ಸರ್ಕಾರಗಳೊಂದಿಗೆ ಮಾತುಕತೆ...
ನವದೆಹಲಿ: ಅಮೆರಿಕಾ ಹಾಗೂ ಆಸ್ಟ್ರೇಲಿಯಾ ಸರ್ಕಾರಗಳು ವೀಸಾ ಕುರಿತ ನಿಯಮಗಳನ್ನು ಬದಲಾವಣೆ ಮಾಡಿರುವುದರ ಬಗ್ಗೆ ಆತಂಕ ಮೂಡಿದ್ದು, ಅಮೆರಿಕಾ ಹಾಗೂ ಆಸ್ಟ್ರೇಲಿಯಾ ಸರ್ಕಾರಗಳೊಂದಿಗೆ ಮಾತುಕತೆ ನಡೆಸುತ್ತಿರುವುದಾಗಿ ಭಾರತ ಸರ್ಕಾರ ಹೇಳಿದೆ.
ಹೆಚ್ 1 ಬಿ ವಿಸಾ ನಿಯಮಗಳ ಬದಲಾವಣೆಯ ಬಗ್ಗೆ ಅಮೆರಿಕಾದ ಡೊನಾಲ್ಡ್ ಟ್ರಂಪ್ ಸರ್ಕಾರದೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ವೀಸಾ ನಿಯಮಗಳ ಬದಲಾವಣೆಯಿಂದ ಭಾರತದ ಉದ್ಯೋಗಿಗಳ ಮೇಲೆ ಉಂಟಾಗುವ ಪರಿಣಾಮದ ಬಗ್ಗೆ ಮನವರಿಕೆ ಮಾಡಲಾಗುತ್ತಿದೆ ಎಂದು ಭಾರತದ ವಿದೇಶಾಂಗ ಇಲಾಖೆ ವಲ್ತಾರ ಗೋಪಾಲ್ ಬಾಗ್ಲೆ ಹೇಳಿದೆ.
ವಿದೇಶಿ ಕಾರ್ಮಿಕರು ಆಸ್ಟ್ರೇಲಿಯಾದಲ್ಲಿ ನೆಲೆಸಿ ಕೆಲಸ ಮಾಡಲು ಅನುಮಾಡಿಕೊಡಬಲ್ಲ ಆಸ್ಟ್ರೇಲಿಯಾ ‘457 ವೀಸಾ’ ಎಂದೇ ಪ್ರಖ್ಯಾತವಾಗಿರುವ ವೀಸಾ ವ್ಯವಸ್ಥೆಯನ್ನು ಆಸ್ಟ್ರೇಲಿಯಾ ಸರ್ಕಾರ ರದ್ದುಗೊಳಿಸಿದ್ದು, ಈ ಬಗ್ಗೆಯೂ ಸಹ ಆಸ್ಟ್ರೇಲಿಯಾ ಸರ್ಕಾರದೊಂದಿಗೆ ಮಾತುಕತೆ ನಡೆಸಲಾಗುತ್ತಿದೆ ಎಂದು ವಕ್ತಾರರು ಮಾಹಿತಿ ನೀಡಿದ್ದಾರೆ.