ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಎಟಿಎಸ್ ಜಂಟಿ ಕಾರ್ಯಾಚರಣೆ: ಮೂವರು ಶಂಕಿತ ಇಸಿಸ್ ಭಯೋತ್ಪಾದಕರ ಬಂಧನ

ಇಸ್ಲಾಮಿಕ್ ಸ್ಟೇಟ್(ಇಸಿಸ್) ಉಗ್ರ ಸಂಘಟನೆಯೊಂದಿಗೆ ನಂಟು ಹೊಂದಿದ್ದ ಮೂವರು ಶಂಕಿತ ಭಯೋತ್ಪಾದಕರನ್ನು ಉತ್ತರಪ್ರದೇಶದ ಭಯೋತ್ಪಾದನಾ ನಿಗ್ರಹ...

ಭಯೋತ್ಪಾದಕರು(ಸಂಗ್ರಹ ಚಿತ್ರ)
Vishwanath S
Updated On : 20 Apr 2017, 6:56 am
ನವದೆಹಲಿ: ಇಸ್ಲಾಮಿಕ್ ಸ್ಟೇಟ್(ಇಸಿಸ್) ಉಗ್ರ ಸಂಘಟನೆಯೊಂದಿಗೆ ನಂಟು ಹೊಂದಿದ್ದ ಮೂವರು ಶಂಕಿತ ಭಯೋತ್ಪಾದಕರನ್ನು ಉತ್ತರಪ್ರದೇಶದ ಭಯೋತ್ಪಾದನಾ ನಿಗ್ರಹ ಪಡೆ(ಎಟಿಎಸ್‌) ಅಧಿಕಾರಿಗಳು ಬಂಧಿಸಿದ್ದಾರೆ.
ಉತ್ತರಪ್ರದೇಶ ಎಟಿಎಸ್ ಅಧಿಕಾರಿಗಳು ಶಂಕಿತ ಉಗ್ರರನ್ನು ಜಲಾಂದರ್, ಮುಂಬೈ ಮತ್ತು ಬಿಜ್ನೋರ್ ನಲ್ಲಿ ಬಂಧಿಸಿದ್ದು, ಬಂಧಿತ ಶಂಕಿತ ಉಗ್ರರು ಬಿಹಾರ, ಉತ್ತರಪ್ರದೇಶ, ರಾಜಸ್ಥಾನ ಮತ್ತು ಮಹಾರಾಷ್ಟ್ರದಲ್ಲಿ ಯುವಕರನ್ನು ಇಸಿಸ್ ಉಗ್ರ ಸಂಘಟನೆಗೆ ನೇಮಕಾತಿ ಮಾಡುತ್ತಿದ್ದರು ಎಂದು ಹೇಳಲಾಗುತ್ತಿದೆ. 
ಇದೊಂದು ಜಂಟಿ ಕಾರ್ಯಾಚರಣೆಯಾಗಿದ್ದು ಈ ಕಾರ್ಯಾಚರಣೆಯಲ್ಲಿ ದೆಹಲಿ ವಿಶೇಷ ಪೊಲೀಸ್ ಪಡೆ, ಆಂಧ್ರ ವಿಶೇಷ ಪೊಲೀಸ್ ಪಡೆ, ಮಹಾರಾಷ್ಟ್ರ ಎಟಿಎಸ್, ಪಂಜಾಬ್ ಮತ್ತು ಬಿಹಾರ ಪೊಲೀಸರು ಸೇರಿ ಈ ಮೂವರು ಶಂಕಿತ ಉಗ್ರರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. 

Advertisement

Advertisement

ಇನ್ನು ಭದ್ರತಾ ಪಡೆ ಯೋಧರು ಆರು ಮಂದಿ ಶಂಕಿತರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement