ಪಕ್ಷ ವಿರೋಧಿ ಚಟುವಟಿಕೆ ಆರೋಪ, ದೆಹಲಿ ಕೈ ಮುಖ್ಯಸ್ಥೆ ಬರ್ಖಾ ಸಿಂಗ್ ಶುಕ್ಲಾ ಉಚ್ಛಾಟನೆ!
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು "ಮಾನಸಿಕ ಅನರ್ಹ" ಎಂದು ಟೀಕಿಸಿದ್ದ ದೆಹಲಿ ಕಾಂಗ್ರೆಸ್ ಮುಖ್ಯಸ್ಥೆ ಬರ್ಖಾ ಸಿಂಗ್ ಶುಕ್ಲಾ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ.
ನವದೆಹಲಿ: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು "ಮಾನಸಿಕ ಅನರ್ಹ" ಎಂದು ಟೀಕಿಸಿದ್ದ ದೆಹಲಿ ಕಾಂಗ್ರೆಸ್ ಮುಖ್ಯಸ್ಥೆ ಬರ್ಖಾ ಸಿಂಗ್ ಶುಕ್ಲಾ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ.
ಪಕ್ಷ ವಿರೋಧಿ ಚಟುವಟಿಕೆ ಆರೋಪ ಹೊರಿಸಿ ಬರ್ಖಾ ಸಿಂಗ್ ಶುಕ್ಲಾ ಅವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಪಕ್ಷದ ಮೂಲಗಳು ತಿಳಿಸಿರುವಂತೆ ಬರ್ಖಾ ಸಿಂಗ್ ಶುಕ್ಲಾ ಅವರನ್ನು ಕಾಂಗ್ರೆಸ್ ಪಕ್ಷದಿಂದ ಪಕ್ಷದಿಂದ 6 ವರ್ಷಗಳ ಕಾಲ ಉಚ್ಛಾಟನೆ ಮಾಡಲಾಗಿದೆ. ನಿನ್ನೆಯಷ್ಟೇ ದೆಹಲಿ ಕಾಂಗ್ರೆಸ್ ನ ಮಹಿಳಾ ಘಟಕದ ಅಧ್ಯಕ್ಷೆ ಸ್ಥಾನಕ್ಕೆ ಗುರುವಾರ ರಾಜೀನಾಮೆ ನೀಡಿದ್ದರು. ರಾಜೀನಾಮೆ ನಿರ್ಧಾರ ಪ್ರಕಟಿಸಿದ ನಂತರ ಬರ್ಖಾ ಸಿಂಗ್ ಅವರು ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದರು. ಪಕ್ಷದ ಶಿಸ್ತನ್ನು ಉಲ್ಲಂಘಿಸಿದ ಆರೋಪದ ಮೇಲೆ ಬರ್ಖಾ ಸಿಂಗ್ ಅವರನ್ನು ಇಂದು ಬೆಳಗ್ಗೆ ಪಕ್ಷದಿಂದ 6 ವರ್ಷಗಳ ಕಾಲ ಉಚ್ಛಾಟನೆ ಮಾಡಲಾಗಿದೆ.
ಪಕ್ಷದಲ್ಲಿರುವ ಅತ್ಯಂತ ಹಿರಿಯ ನಾಯಕರೂ ಸಹ ರಾಹುಲ್ ಗಾಂಧಿ ನಾಯಕನಾಗಲು ಅನರ್ಹ ಎಂಬ ಅಭಿಪ್ರಾಯ ಹೊಂದಿದ್ದಾರೆ. ಆದರೆ ಅವರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಿಲ್ಲ. ಪ್ರಶ್ನೆಗಳನ್ನು ಕೇಳುವ ಪಕ್ಷದ ಕಾರ್ಯಕರ್ತರನ್ನು ಭೇಟಿ ಮಾಡಲು ರಾಹುಲ್ ಗಾಂಧಿ ಹಿಂದೇಟು ಹಾಕುತ್ತಿದ್ದಾರೆ. ರಾಹುಲ್ ತಮ್ಮನ್ನು ಪ್ರಶ್ನಿಸುವವರನ್ನು ಭೇಟಿ ಮಾಡುವುದೇ ಇಲ್ಲ. ಅವರ ಪರ ಮಾತನಾಡುವವರನ್ನು ಮಾತ್ರ ಅವರು ಭೇಟಿ ಮಾಡುತ್ತಾರೆ ಎಂದು ಬರ್ಖಾ ಸಿಂಗ್ ಆರೋಪ ಮಾಡಿದ್ದರು.
ಅಲ್ಲದೆ ದೆಹಲಿ ಕಾಂಗ್ರೆಸ್ ಮುಖಂಡ ಅಜಯ್ ಮಕೇನ್ ವಿರುದ್ಧವೂ ವಾಗ್ದಾಳಿ ನಡೆಸಿದ್ದ ಬರ್ಖಾ ಸಿಂಗ್ ಶುಕ್ಲಾ ಅವರು, ಕೆಲ ಮುಖಂಡರು ಪಕ್ಷದ ಮಹಿಳಾ ಕಾರ್ಯಕರ್ತರನ್ನು ದುರುಪಯೋಗಿಸುವುದು, ಬೆದರಿಕೆ ಹಾಕುವುದು ಮುಂತಾದ ಅನಪೇಕ್ಷೀತ ಕೃತ್ಯಗಳನ್ನು ಎಸಗುತ್ತಿದ್ದಾರೆ. ಮಹಿಳಾ ಕಾರ್ಯಕರ್ತರಿಗೆ ನೀಡಲಾಗುತ್ತಿರುವ ಕಿರುಕುಳವನ್ನು ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಕಡೆಗಣಿಸುತ್ತಿದ್ದಾರೆ ಅಥವಾ ನಿರ್ಲಕ್ಷಿಸುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.