ನಿತೀಶ್ ಕುಮಾರ್-ಸೋನಿಯಾ ಗಾಂಧಿ 
ದೇಶ

ರಾಷ್ಟ್ರಪತಿ ಚುನಾವಣೆಗೂ ಮಹಾಮೈತ್ರಿ?: ಸೋನಿಯಾ ಗಾಂಧಿಯನ್ನು ಭೇಟಿ ಮಾಡಿದ ನಿತೀಶ್ ಕುಮಾರ್

ರಾಷ್ಟ್ರಪತಿ ಚುನಾವಣೆಯ ದೃಷ್ಟಿಯಿಂದ ಈ ಭೇಟಿ ಮಹತ್ವ ಪಡೆದುಕೊಂಡಿದ್ದು ರಾಷ್ಟ್ರಪತಿ ಚುನಾವಣೆಗೆ ಎನ್ ಡಿಎ ಅಭ್ಯರ್ಥಿ ವಿರುದ್ಧ ಮತ್ತೊಮ್ಮ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಬಿಹಾರ ಮಾದರಿಯ ಮಹಾಮೈತ್ರಿ

ನವದೆಹಲಿ: ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಬಿಹಾರ ಸಿಎಂ ನಿತೀಶ್ ಕುಮಾರ್ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ರಾಷ್ಟ್ರಪತಿ ಚುನಾವಣೆಯ ದೃಷ್ಟಿಯಿಂದ ಈ ಭೇಟಿ ಮಹತ್ವ ಪಡೆದುಕೊಂಡಿದ್ದು ರಾಷ್ಟ್ರಪತಿ ಚುನಾವಣೆಗೆ ಎನ್ ಡಿಎ ಅಭ್ಯರ್ಥಿ ವಿರುದ್ಧ ಮತ್ತೊಮ್ಮ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಬಿಹಾರ ಮಾದರಿಯ ಮಹಾಮೈತ್ರಿ ಏರ್ಪಡುವ ಸಾಧ್ಯತೆ ಇದೆ ಎಂದು ವಿಶ್ಲೇಷಿಸಲಾಗುತ್ತಿದೆ. 
ಬಿಜೆಪಿ ನೇತೃತ್ವದ ಎನ್ ಡಿಎ ವಿರುದ್ಧ ಪ್ರತಿಪಕ್ಷಗಳನ್ನು ಒಗ್ಗೂಡಿಸಲು ನಿತೀಶ್ ಕುಮಾರ್ ಸೋನಿಯಾ ಗಾಂಧಿ ಅವರಿಗೆ ಸಲಹೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಸಧ್ಯದಲ್ಲೇ ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ಎನ್ ಡಿಎ ಅಭ್ಯರ್ಥಿ ವಿರುದ್ಧ ಮಹಾ ಮೈತ್ರಿಕೂಟದ ಅಭ್ಯರ್ಥಿಯೊಬ್ಬರನ್ನು ಕಣಕ್ಕಿಳಿಸುವುದರ ಬಗ್ಗೆ ಭೇಟಿ ವೇಳೆ ಚರ್ಚೆ ನಡೆಸಲಾಗಿದೆ. 
ಜೆಡಿಯು ವಕ್ತಾರ ಕೆಸಿ ತ್ಯಾಗಿ ಈ ಬಗ್ಗೆ ಹೇಳಿಕೆ ನೀಡಿದ್ದು, ರಾಷ್ಟ್ರಪತಿ ಚುನಾವಣೆಗೆ ಬಗ್ಗೆ ಪ್ರಧಾನ ಚರ್ಚೆ ನಡೆಯದೇ ಇದ್ದರೂ ಸಹ ರಾಷ್ಟ್ರದ ಹಿತದೃಷ್ಟಿಯಿಂದ ಎನ್ ಡಿಎ ವಿರುದ್ಧ ಅಭ್ಯರ್ಥಿಯೊಬ್ಬರನ್ನು ಕಣಕ್ಕಿಳಿಸುವುದು ಸೂಕ್ತ ಎಂದು ಅಭಿಪ್ರಾಯಪಟ್ಟಿದ್ದಾರೆ.  ಇದೇ ವೇಳೆ 2019 ರ ಚುನಾವಣೆಗೂ 2015 ರ ಮಾದರಿಯಲ್ಲೇ ಮಹಾ ಮೈತ್ರಿಕೂಟವನ್ನು ರಚಿಸುವ ಬಗ್ಗೆಯೂ ಜೆಡಿಯು ಚಿಂತನೆ ನಡೆಸುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಎಲ್ಲಾ ಪ್ರತಿಪಕ್ಷಗಳನ್ನು ಒಗ್ಗೂಡಿಸಲು ಕಾರ್ಯತಂತ್ರ ರೂಪಿಸುತ್ತಿದೆ ಎಂದು ವಿಶ್ಲೇಷಿಸಲಾಗುತ್ತಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಕಾರ್ಮಿಕರ ಆರೋಗ್ಯ ತಪಾಸಣೆ ಹೆಸರಲ್ಲಿ 800 ಕೋಟಿ ರೂ. ಲೂಟಿ; ಸಂತೋಷ್ ಲಾಡ್ ರಾಜೀನಾಮೆಗೆ ಆರಗ ಜ್ಞಾನೇಂದ್ರ ಆಗ್ರಹ