ನವದೆಹಲಿ: ಬಿಜೆಪಿ ಸಂಸದ ಸುಬ್ರಹ್ಮಣಿಯನ್ ಸ್ವಾಮಿ ಹಾಗೂ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ರಾಜಕೀಯ, ಸೈದ್ಧಾಂತಿಕ ಬದ್ಧವೈರಿಗಳೆಂಬುದು ಎಲ್ಲರಿಗೂ ಗೊತ್ತಿದೆ. ಆದರೆ ಸುಬ್ರಹ್ಮಣಿಯನ್ ಸ್ವಾಮಿ ಅವರ ಒಂದು ವಿಚಾರವನ್ನು ದಿಗ್ವಿಜಯ್ ಸಿಂಗ್ ಒಪ್ಪುತ್ತಾರಂತೆ. ಅದೇನು ಅಂತ ಅವರೇ ಟ್ವಿಟರ್ ನಲ್ಲಿ ಹೇಳಿದ್ದಾರೆ.
ಕೆಲವೊಮ್ಮೆ ಸ್ವಪಕ್ಷೀಯರನ್ನೇ ಟೀಕಿಸಿ ಜನ್ಮ ಜಾಲಾಡುವ ಸ್ವಭಾವವಿರುವ ಬಿಜೆಪಿ ಸಂಸದ ಸುಬ್ರಹ್ಮಣಿಯನ್ ಸ್ವಾಮಿ ಅವರು ಜಮ್ಮು-ಕಾಶ್ಮೀರದಲ್ಲಿ ಬಿಜೆಪಿ-ಪಿಡಿಪಿ ಮೈತ್ರಿ ಬಗ್ಗೆ ಟ್ವೀಟ್ ಮಾಡಿದ್ದರು. ಈ ಟ್ವೀಟ್ ಗೆ ದಿಗ್ವಿಜಯ್ ಸಿಂಗ್ ತಮ್ಮ ಸಹಮತಿ ಸೂಚಿಸಿದ್ದಾರೆ. " ಜಮ್ಮು-ಕಾಶ್ಮೀರದಲ್ಲಿ ಪಿಡಿಪಿಯೊಂದಿಗಿನ ಮೈತ್ರಿ ವಿಫಲವಾಗುವುದಕ್ಕೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಹಾಗೂ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರೇ ಕಾರಣ ಎಂದು ಸುಬ್ರಹ್ಮಣಿಯನ್ ಸ್ವಾಮಿ ಟ್ವೀಟ್ ಗೆ ದಿಗ್ವಿಜಯ್ ಸಿಂಗ್ ಪ್ರತಿಕ್ರಿಯೆ ನೀಡಿದ್ದು, ಇದೊಂದು ವಿಚಾರದಲ್ಲಿ ಸುಬ್ರಹ್ಮಣಿಯನ್ ಸ್ವಾಮಿ ಅವರನ್ನು ಒಪ್ಪುವುದಾಗಿ ತಿಳಿಸಿದ್ದಾರೆ.
ಜಮ್ಮು-ಕಾಶ್ಮೀರದಲ್ಲಿ ಬಿಜೆಪಿ-ಪಿಡಿಪಿ ಮೈತ್ರಿ ಸರ್ಕಾರದ ಬಗ್ಗೆ ಸಂದರ್ಶನವೊಂದರಲ್ಲಿ ಮಾತನಾಡಿದ್ದ ಬಿಜೆಪಿ ನಾಯಕ ರಾಮ್ ಮಾಧವ್ ಅಲ್ಲಿನ ಸರ್ಕಾರ ನಿರೀಕ್ಷಿತ ಮಟ್ಟದಲ್ಲಿ ಯಶಸ್ವಿಯಾಗಿದೆಯೇ ಎಂದು ಕೇಳುವುದಾದರೆ ಇನ್ನಷ್ಟು ಚೆನ್ನಾಗಿ ಕಾರ್ಯನಿರ್ವಹಣೆ ಮಾಡಬಹುದಿತ್ತು ಎಂಬುದನ್ನು ಒಪ್ಪಿಕೊಳ್ಳುತ್ತೇವೆ ಎಂದಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics