ದೇಶ

ಆತ್ಮಹತ್ಯೆಗೆ ಶರಣಾದ ಖರಗಪುರ್ ಐಐಟಿ ವಿದ್ಯಾರ್ಥಿ

Lingaraj Badiger
ಖರಗಪುರ್: ಖರಗಪುರ್ ಐಐಟಿಯ ನಾಲ್ಕನೆ ವರ್ಷದ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶನಿವಾರ ಪೊಲೀಸರು ತಿಳಿಸಿದ್ದಾರೆ.
ಏರೋಸ್ಪೇಸ್ ಇಂಜಿನಿಯರಿಂಗ್ ಮಾಡುತ್ತಿದ್ದ ನಿಧಿನ್ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿಯಾಗಿದ್ದು, ನಿನ್ನೆ ರೂಮ್ ನಿಂದ ಹೊರಬರದ ಹಿನ್ನೆಲೆಯಲ್ಲಿ ಸ್ನೇಹಿತರು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಬಳಿಕ ಪೊಲೀಸರಿಗೆ ಮಾಹಿತಿ ನೀಡಲಾಗಿದೆ.
ವಿದ್ಯಾರ್ಥಿ ನಿಲಯದ ನೆಹರು ಹಾಲ್​ನ ಬಿ ಬ್ಲಾಕ್​ನಲ್ಲಿ ಸೀಲಿಂಗ್ ಫ್ಯಾನ್​ಗೆ ನೇಣು ಬಿಗಿದುಕೊಂಡು ಈ ನಿಧಿನ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆತ್ಮಹತ್ಯೆಯ ವಿಷಯ ತಿಳಿದ ನಂತರ ಸ್ಥಳಕ್ಕೆ ಆಗಮಿಸಿದ ಪೊಲೀಸರು, ಬಾಗಿಲನ್ನು ಮುರಿದು ಶವವನ್ನು ಹೊರತಂದಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಈ ಕುರಿತು ಪ್ರತಿಕ್ರಿಯಿಸಲು ಐಐಟಿ ಅಧಿಕಾರಿಗಳು ನಿರಾಕರಿಸಿದ್ದಾರೆ.
ಕೇರಳ ಮೂಲದ ನಿಧಿನ್ ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ಬರೆದಿದ್ದು, ಅದನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
SCROLL FOR NEXT