ದೇಶ

ಸಾಮಾಜಿಕ ಮಾಧ್ಯಮ ಬಳಕೆ ಕುರಿತು ಅಧಿಕಾರಿಗಳಿಗೆ ಮೋದಿ ಸಲಹೆ: ರಾಹುಲ್ ಗಾಂಧಿ ಆಕ್ಷೇಪ

Sumana Upadhyaya
ನವದೆಹಲಿ: ಸ್ವಯಂ ಪ್ರಚಾರಕ್ಕೆ ಸಾಮಾಜಿಕ ಮಾಧ್ಯಮಗಳನ್ನು ಬಳಸದಂತೆ ಅಧಿಕಾರಿಗಳಿಗೆ ಸಲಹೆ ನೀಡಿದ ಪ್ರಧಾನಿ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ಮೋದಿಯವರೇ ಈ ವಿಷಯದಲ್ಲಿ ಉದಾಹರಣೆಯಾಗಿದ್ದಾರೆ ಎಂದು ಟೀಕಿಸಿದ್ದಾರೆ.
ಸಾಮಾಜಿಕ ಮಾಧ್ಯಮವನ್ನು ಸ್ವ ಪ್ರಚಾರಕ್ಕಾಗಿ ಬಳಸಬಾರದು ಅಥವಾ ಆನ್ ಲೈನ್ ನಲ್ಲಿ ಹೆಚ್ಚು ಸಮಯ ಕಳೆಯಬಾರದು ಎಂದು ನಿನ್ನೆ ಮೋದಿಯವರು ಅಧಿಕಾರಿಗಳಿಗೆ ಹೇಳಿದ್ದಕ್ಕೆ ಇಂದು ಟ್ವಿಟ್ಟರ್ ನಲ್ಲಿ ಆಕ್ಷೇಪ ವ್ಯಕ್ತಪಡಿಸಿದ ರಾಹುಲ್ ಗಾಂಧಿ, ಮೋದಿಯವರೇ ಸಾಮಾಜಿಕ ಮಾಧ್ಯಮಕ್ಕೆ ಹೆಚ್ಚು ಪ್ರಾಮುಖ್ಯತೆ ನೀಡುತ್ತಿದ್ದಾರೆ. ಬೇರೆಯವರಿಗೆ ಉಪದೇಶ ಮಾಡುವ ಮುನ್ನ ಅವರೇ ಉದಾಹರಣೆಯಾಗಿರಬೇಕು ಎಂದು ಹೇಳಿದರು.
ಪ್ರಧಾನಿಯವರು ಸಾಮಾಜಿಕ ಮಾಧ್ಯಮವನ್ನು ಅತ್ಯಂತ ಕ್ರಿಯಾಶೀಲವಾಗಿ ಬಳಸುತ್ತಿದ್ದು ಸಾರ್ವಜನಿಕರೊಂದಿಗೆ ಹೆಚ್ಚು ಸಂಪರ್ಕದಲ್ಲಿರುತ್ತಾರೆ. ಟ್ವಿಟ್ಟರ್ ಮತ್ತು ಇನ್ಸ್ಟಾಗ್ರಾಂನಲ್ಲಿ ಅತಿ ಹೆಚ್ಚು ಅನುಯಾಯಿಗಳನ್ನು ಹೊಂದಿದ್ದಾರೆ.
SCROLL FOR NEXT