ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್
ಮುಂಬೈ: ದೇಶದಾದ್ಯಂತ ಸಂಪೂರ್ಣವಾಗಿ ಮದ್ಯ ನಿಷೇಧಿಸಿ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಶನಿವಾರ ಕರೆ ನೀಡಿದ್ದಾರೆ.
ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿರುವ ಅವರು, ಹಿಂದೂಗಳು, ಮುಸ್ಲಿಮರು, ಸಿಕ್ಖರು ಮತ್ತು ಕ್ರಿಶ್ಚಿಯನ್ನರು ಎಲ್ಲಾ ಧರ್ಮದವರು ದೇಶದಾದ್ಯಂತ ಸಂಪೂರ್ಣವಾಗಿ ಮದ್ಯ ನಿಷೇಧ ಮಾಡುವಂತೆ ಅವಿರೋಧ ವ್ಯಕ್ತಪಡಿಸಿದ್ದಾರೆ. ದೇಶದಾದ್ಯಂತ ಮದ್ಯ ನಿಷೇಧ ಮಾಡುವುದರಿಂದ ಇದು ಅಭಿವೃದ್ಧಿ ಹಾಗೂ ಬೆಳವಣಿಗೆಗೆ ದಾರಿ ಮಾಡಿಕೊಡಲಿದೆ ಎಂದು ಹೇಳಿದ್ದಾರೆ.
ಪ್ರತೀ ಧರ್ಮದವರೂ ಮದ್ಯ ನಿಷೇಧಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಮದ್ಯವನ್ನು ದೇಶದಾದ್ಯಂತ ನಿಷೇಧ ಮಾಡಬೇಕು. ಮದ್ಯದಿಂದಾಗಿ ಘರ್ಷಣೆ ಹಾಗೂ ಹಿಂಸಾಚಾರಗಳು ಹೆಚ್ಚಾಗುತ್ತಿದ್ದು, ದೇಶದ ಅಭಿವೃದ್ಧಿಗಾಗಿ ನಿಷೇಧ ಮಾಡಬೇಕಿದೆ. ಹೀಗಾಗಿ ದೇಶದಾದ್ಯಂತ ಮದ್ಯವನ್ನು ನಿಷೇಧ ಮಾಡಬೇಕು. ಬಿಹಾರ ಜನತೆ ಎಂದಿಗೂ ಬೇರೊಬ್ಬರಿಗೆ ತೊಂದರೆಯನ್ನು ನೀಡಿಲ್ಲ. ಇತರರಿಗೆ ಉದ್ಯೋಗಾವಕಾಶವನ್ನು ಒದಗಿಸಿಕೊಟ್ಟಿದ್ದಾರೆ. ಇದರಿಂದ ನನಗೆ ಬಹಳ ಸಂತೋಷ ಹಾಗೂ ತೃಪ್ತಿಯಾಗಿದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics