ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

'ವಿಫಲ' ಪಿ.ಚಿದಂಬರಂ ಅವರ ಹೇಳಿಕೆಗಳಿಗೆ ನಾವು ತಲೆಕೆಡಿಸಿಕೊಳ್ಳುವುದಿಲ್ಲ: ಬಿಜೆಪಿ

ನಕಾರಾತ್ಮಕ ಹೇಳಿಕೆಗಳನ್ನು ನೀಡುವ ಮೂಲಕ ಕಾಂಗ್ರೆಸ್ ಪಕ್ಷವೇ ಸಮಸ್ಯೆಗಳಲ್ಲಿ ಸಿಲುಕಿಕೊಂಡಿದ್ದು, 'ವಿಫಲ' ಮಾಜಿ ಗೃಹ ಸಚಿವ ಪಿ.ಚಿದಂಬರಂ ಅವರ ಹೇಳಿಕೆಗಳಿಕೆಗಳಿಗೆ ನಾವು ತಲೆ ಕೆಡಿಸಿಕೊಳ್ಳುವುದಿಲ್ಲ...

ಪಿ.ಚಿದಂಬರಂ
Manjula VN
Updated On : 23 Apr 2017, 11:27 am
ಶ್ರೀನಗರ: ನಕಾರಾತ್ಮಕ ಹೇಳಿಕೆಗಳನ್ನು ನೀಡುವ ಮೂಲಕ ಕಾಂಗ್ರೆಸ್ ಪಕ್ಷವೇ ಸಮಸ್ಯೆಗಳಲ್ಲಿ ಸಿಲುಕಿಕೊಂಡಿದ್ದು, 'ವಿಫಲ' ಮಾಜಿ ಗೃಹ ಸಚಿವ ಪಿ.ಚಿದಂಬರಂ ಅವರ ಹೇಳಿಕೆಗಳಿಕೆಗಳಿಗೆ ನಾವು ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ಬಿಜೆಪಿ ಭಾನುವಾರ ಹೇಳಿದೆ. 
ಈ ಕುರಿತಂತೆ ಮಾತನಾಡಿರುವ ಬಿಜೆಪಿ ನಾಯಕ ರವೀಂದ್ರ ರೈನಾ ಅವರು, ಕಾಶ್ಮೀರದಲ್ಲಿ ಇಂದು ನಿರ್ಮಾಣವಾಗಿರುವ ಪರಿಸ್ಥಿತಿಗೆ ಅಂದಿನ ಕಾಂಗ್ರೆಸ್ ಪಕ್ಷ ಹೇರಿದ್ದ ಕೆಟ್ಟ ನೀತಿಗಳೇ ಜವಾಬ್ದಾರಿಯಾಗಿದೆ. ಪ್ರಸ್ತುತ ಕಾಂಗ್ರೆಸ್ ಪಕ್ಷವೇ ತನ್ನದೇ ಸಮಸ್ಯೆಗಳಲ್ಲಿ ಮುಳುಗಿದ್ದು, ಹೀಗಾಗಿ ಚಿದಂಬರಂ ಅವರ ಹೇಳಿಕೆಗಳಿಗೆ ನಾವು ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ. 
2010ರ ಚಿದಂಬರಂ ಅವರು ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ನಡೆದ ಕಲ್ಲು ತೂರಾಟ ಪ್ರತಿಭಟನೆಯನ್ನು ನೆನೆದರೆ, ಚಿದಂಬರಂ ಅವರ ನಕಾರಾತ್ಮಕ ಹೇಳಿಕೆಗಳು ಹಾಗೂ ಟ್ವೀಟ್ ಗಳಿಂದ ನಾವು ತಲೆಕೆಡಿಸಿಕೊಳ್ಳುವುದಿಲ್ಲ. ಚಿದಂಬರಂ ಅವರು ಭಾರತದ ಗೃಹ ಸಚಿವರಾಗಿ ವಿಫಲಾಗಿದ್ದಾರೆ, ಕೆಟ್ಟ ರೀತಿಯಲ್ಲಿ ಸಲಹೆಗಳನ್ನು ನೀಡುತ್ತಿದ್ದಾರೆ. ಜಮ್ಮು ಮತ್ತು ಕಾಶ್ಮೀರ ಸೇರಿದಂತೆ ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾದ ಸರ್ಕಾರಗಳನ್ನು ಉರುಳಿಸುವುದು ಕಾಂಗ್ರೆಸ್'ಗೆ ಬೇಕು. ಕಾಶ್ಮೀರದಲ್ಲಿ ಶಾಂತಿ, ಸೌಹಾರ್ದತೆ, ಸೋದರತ್ವ ಭಾವನೆಯನ್ನು ಮರು ಸ್ಥಾಪಿಸುವ ಸಲುವಾಗಿ ಬಿಜೆಪಿ ಹಾಗೂ ಪಿಡಿಪಿ ಮೈತ್ರಿಗೊಂಡಿದೆ. ಆದರೆ, ಕಾಂಗ್ರೆಸ್ ಪಕ್ಷ ಸಮಸ್ಯೆಗಳನ್ನು ಸೃಷ್ಟಿಸುತ್ತಿದೆ ಎಂದು ತಿಳಿಸಿದ್ದಾರೆ. 

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement