ಮುಂಬೈ: ಮುಂಬೈ ಕಾರು ಶೋ ರೂಂ ಒಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಇಬ್ಬರು ಸಾವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ.
ನವೀ ಮುಂಬೈನ ಕರ್ಘಾರ್ ಪ್ರದೇಶದಲ್ಲಿರುವ ಮಾರುತಿ ಸುಜುಕಿ ಕಾರು ಶೋ ರೂಂನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ, ವಿಚಾರ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ದೌಡಾಯಿಸಿದ 5 ಅಗ್ನಿ ಶಾಮಕ ವಾಹನ ಹಾಗೂ ಹಲವು ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು. ಆದರೆ ಅಷ್ಟು ಹೊತ್ತಿಗಾಗಲೇ ಷೋ ರೂಂ ಒಳಗಿದ್ದ ಇಬ್ಬರು ಸಾವನ್ನಪ್ಪಿದ್ದರು ಎಂದು ತಿಳಿದುಬಂದಿದೆ.
ಮೃತರನ್ನು ಶೋ ರೂಂ ನ ಭದ್ರತಾ ಸಿಬ್ಬಂದಿಗಳು ಗುರುತಿಸಲಾಗಿದ್ದು, ಪ್ರಸ್ತುತ ಮೃತ ದೇಹಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಅಂತೆಯೇ ಅಗ್ನಿ ಅವಘಡಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣ ಎಂದು ಶಂಕಿಸಲಾಗುತ್ತಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಕರ್ಘಾರ್ ಪೊಲೀಸ್ ಠಾಣೆಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.