ನವದೆಹಲಿ: ರಾಷ್ಟ್ರಪತಿ ಭವನದಲ್ಲಿ ಏ.23 ರಂದು ನೀತಿ ಆಯೋಗದ ಸಭೆ ನಡೆಯಲಿದ್ದು, ಭಾರತದ ಕ್ಷಿಪ್ರಗತಿಯ ರೂಪಾಂತರದ ಬಗ್ಗೆ ಮಾರ್ಗಸೂಚಿಯನ್ನು ಪ್ರಸ್ತುತಪಡಿಸಲಾಗುತದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ನೀತಿ ಆಯೋಗದ ಉಪಾಧ್ಯಕ್ಷ ಅರವಿಂದ್ ಪನಗಾರಿಯಾ ಮಾರ್ಗಸೂಚಿಯನ್ನು ಪ್ರಸ್ತುತಪಡಿಸಲಿದ್ದು, 15 ವರ್ಷಗಳ ವಿಷನ್ ಡಾಕ್ಯುಮೆಂಟ್, 7 ವರ್ಷಗಳ ಕಾರ್ಯತಂತ್ರ ಡಾಕ್ಯುಮೆಂಟ್, 3 ವರ್ಷಗಳ ಆಕ್ಷನ್ ಪ್ಲಾನ್ ನ್ನು ಒಳಗೊಂಡಿದೆ ಎಂದು ಸರ್ಕಾರದ ಹೇಳಿಕೆ ತಿಳಿಸಿದೆ.
ರೈತರ ಆದಾಯವನ್ನು ದ್ವಿಗುಣಗೊಳಿಸುವುದರ ಬಗ್ಗೆ ಮಧ್ಯಪ್ರದೇಶದ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಮಾರ್ಗಸೂಚಿಗಳನ್ನು ಪ್ರಸ್ತುತಪಡಿಸಲಿದ್ದು, ಜಿಎಸ್ ಟಿ ಕಾಯ್ದೆಗೆ ಸಂಬಂಧಿಸಿದ ಪ್ರಸ್ತುತಿಯೂ ಸಹ ಮಹತ್ವ ಪಡೆದುಕೊಂಡಿದೆ. ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು ನೀತಿ ಆಯೋಗದ ಸಭೆಯಲ್ಲಿ ಭಾಗವಹಿಸಲಿದ್ದಾರೆ.