ಮಹಿಳೆಯರು ಏಕೆ ಈ ದೇಶದಲ್ಲಿ ನೆಮ್ಮದಿಯಿಂದ ಬದುಕಲು ಸಾಧ್ಯವಾಗುತ್ತಿಲ್ಲ: ಸುಪ್ರೀಂ ಕೋರ್ಟ್ ಪ್ರಶ್ನೆ
ಈ ದೇಶದಲ್ಲಿ ಮಹಿಳೆಯರು ಶಾಂತಿಯಿಂದರಲು ಏಕೆ ಸಾಧ್ಯವಿಲ್ಲ ಎಂದು ಪ್ರಶ್ನಿಸಿರುವ ಸುಪ್ರೀಂ ಕೋರ್ಟ್....
ನವದೆಹಲಿ: ಈ ದೇಶದಲ್ಲಿ ಮಹಿಳೆಯರು ಶಾಂತಿಯಿಂದರಲು ಏಕೆ ಸಾಧ್ಯವಿಲ್ಲ ಎಂದು ಪ್ರಶ್ನಿಸಿರುವ ಸುಪ್ರೀಂ ಕೋರ್ಟ್ ನ ನ್ಯಾಯಪೀಠ, ಮಹಿಳೆಯರ ವಿರುದ್ಧ ಬೆಳೆಯುತ್ತಿರುವ ಅಪರಾಧಗಳಿಗೆ ತೀವ್ರ ಕಳವಳ ವ್ಯಕ್ತಪಡಿಸಿದೆ.
ಯುವತಿಯೊಬ್ಬಳಿಗೆ ಚುಡಾಯಿಸಿ ಅಪಮಾನ ಮಾಡಿ ಆಕೆಯ ಆತ್ಮಹತ್ಯೆಗೆ ಕಾರಣನಾದ ಆರೋಪದ ಮೇಲೆ ಏಳು ವರ್ಷ ಸಜೆ ವಿಧಿಸಿದ ಹಿಮಾಚಲ ಪ್ರದೇಶ ಹೈಕೋರ್ಟ್‍ನ ತೀರ್ಪನ್ನು ಪ್ರಶ್ನಿಸಿ ವ್ಯಕ್ತಿಯೊಬ್ಬ ಸಲ್ಲಿಸಿದ ಮೇಲ್ಮನವಿ ವಿಚಾರಣೆ ಸಂದರ್ಭದಲ್ಲಿ ನ್ಯಾಯಮೂರ್ತಿ ದೀಪಕ್ ಮಿಶ್ರ ನೇತೃತ್ವದ ನ್ಯಾಯಪೀಠ ಈ ಪ್ರಶ್ನೆ ಕೇಳಿದೆ.
ನಮ್ಮ ದೇಶದಲ್ಲಿ ಮಹಿಳೆಯರು ಏಕೆ ಶಾಂತಿ ಮತ್ತು ನೆಮ್ಮದಿಯಿಂದ ಬದುಕಲು ಸಾಧ್ಯವಾಗುತ್ತಿಲ್ಲ ಎಂದು ಪ್ರಶ್ನಿಸಿದ ಪೀಠವು ಯಾರೊಬ್ಬರು ಓರ್ವ ಯುವತಿ ಅಥವಾ ಮಹಿಳೆಗೆ ಪ್ರೀತಿಸುವಂತೆ ಬಲವಂತ ಮಾಡಲು ಸಾಧ್ಯವಿಲ್ಲ. ಅದು ಆಕೆಯ ಸ್ವಾತಂತ್ರ್ಯ ಮತ್ತು ವೈಯಕ್ತಿಕ ಆಯ್ಕೆಯಾಗಿರುತ್ತದೆ. ಈ ವಿಷಯದಲ್ಲಿ ಹಿಮಾಚಲಪ್ರದೇಶ ಹೈಕೋರ್ಟ್ ನೀಡಿರುವ ತೀರ್ಪು ಸೂಕ್ತವಾಗಿದೆ ಎಂದು ಅಭಿಪ್ರಾಯಪಟ್ಟರು.