ಜಯಲಲಿತಾ 
ದೇಶ

ಜಯಲಲಿತಾಗೆ ಸೇರಿದ ಎಸ್ಟೇಟ್ ನಲ್ಲಿ ಸೆಕ್ಯೂರಿಟಿ ಗಾರ್ಡ್ ಭೀಕರ ಹತ್ಯೆ

ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿ. ಜಯಲಲಿತಾ ಸೇರಿದ್ದ ಕೊಡನಾಡು ಟೀ ಎಸ್ಟೇಟ್ ನಲ್ಲಿ ಸೆಕ್ಯೂರಿಟಿ ಗಾರ್ಡ್ ವೊಬ್ಬನನ್ನು ಭೀಕರವಾಗಿ ಹತ್ಯೆ...

ಚೆನ್ನೈ: ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿ. ಜಯಲಲಿತಾ ಸೇರಿದ್ದ ಕೊಡನಾಡು ಟೀ ಎಸ್ಟೇಟ್ ನಲ್ಲಿ ಸೆಕ್ಯೂರಿಟಿ ಗಾರ್ಡ್ ವೊಬ್ಬನನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. 
ನೀಲಗಿರಿ ಜಿಲ್ಲೆಯಲ್ಲಿರುವ  ಕೊಡನಾಡು ಎಸ್ಟೇಟ್ ಬಂಗಲೆಯ ಸೆಕ್ಯುರಿಟಿ ಗಾರ್ಡ್‌ ಆಗಿದ್ದ ವ್ಯಕ್ತಿ ಸತ್ತು ಬಿದ್ದಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.
ಅಪರಿಚಿತ ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಜಯಲಲಿತಾ ಅವರ ಕೊಡನಾಡಿನಲ್ಲಿರುವ ಎಸ್ಟೇಟ್‌ 900 ಎಕರೆಯದ್ದಾಗಿದ್ದು ಇಲ್ಲಿನ ಬೃಹತ್‌ ಬಂಗಲೆಯಲ್ಲಿ ಜಯಾ ಆಗಾಗ್ಗೆ ಬಂದು ಹೋಗುತ್ತಿದ್ದರು. ನಿಧನಕ್ಕೆ ಮುನ್ನ ಕೆಲವು ವರ್ಷಗಳ ಹಿಂದಿನಿಂದಲೇ ಜಯಾ ಈ ಬಂಗಲೆಯಲ್ಲಿ ವಿಶ್ರಾಂತಿ ಹಾಗೂ ಚಿಕಿತ್ಸೆ ಪಡೆಯುತ್ತಿದ್ದರು.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಕೊಲೆಗಾರರ ಪತ್ತೆಗಾಗಿ ಪೊಲೀಸರು 5 ತಂಡವನ್ನು ರಚಿಸಿದ್ದಾರೆ. ಕೊಲೆಯ ಬಗ್ಗೆ ಏನಾದರೂ ಸುಳಿವು ಸಿಕ್ಕರೆ ಮಾಹಿತಿ ನೀಡುವಂತೆ ಸ್ಥಳೀಯರಿಗೆ ಪೊಲೀಸರು ಮನವಿ ಮಾಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸೌದಿ ಮೇಲೆ ಕ್ಷಿಪಣಿ ದಾಳಿ; Houthi ಉಗ್ರರ ವಿರುದ್ಧ ಸಿಡಿದೆದ್ದ ಭಾರತ, 'ನೌಕಾಯಾನ ಸ್ವಾತಂತ್ರ್ಯಕ್ಕೆ ಬೆದರಿಕೆ ಒಡ್ಡುವ ದಾಳಿ ಒಪ್ಪಲ್ಲ' ಎಂದು ಗುಡುಗು

ಬೆಂಗಳೂರು: ರೀಲ್ಸ್ ವಿಚಾರಕ್ಕೆ ಗಲಾಟೆ; ಬಿಯರ್ ಬಾಟಲ್‌ನಿಂದ ಪತ್ನಿ ಕೊಂದು ಪತಿ ಆತ್ಮಹತ್ಯೆ!

CJPಗೆ ಬಿಗ್ ಶಾಕ್; 2 ಕೋಟಿ ಮಾನನಷ್ಟ ಮೊಕದ್ದಮೆ, ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಹಿರಿಯ ವಕೀಲ Gaurav Bhatia!

ಮಂಡ್ಯ ಸಕ್ಕರೆ ಕಾರ್ಖಾನೆಯಲ್ಲಿ ದುರಂತ: ಕುದಿಯುವ ನೀರಿನ ಹೊಂಡಕ್ಕೆ ಬಿದ್ದು ಕಾರ್ಮಿಕ ಸಾವು

ಸಚಿವ ಸತೀಶ್ ಜಾರಕಿಹೊಳಿ ನಿವಾಸ ಮೇಲೆ ದಾಳಿ ಏಕೆ; ED ಹೇಳಿದ್ದೇನು? Video