ಕಾಶ್ಮೀರ ಬಿಜೆಪಿ ರಾಜ್ಯಾಧ್ಯಕ್ಷ ಸತ್ ಶರ್ಮಾ
ಜಮ್ಮು: ಜಮ್ಮು-ಕಾಶ್ಮೀರ ಸರ್ಕಾರ ಸರಿಯಾದ ರೀತಿಯಲ್ಲಿ ಕೆಲಸ ಮಾಡುತ್ತಿದ್ದು, ಬಿಜೆಪಿ-ಪಿಡಿಪಿ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ಕಾಶ್ಮೀರ ಬಿಜೆಪಿ ರಾಜ್ಯಾಧ್ಯಕ್ಷ ಸತ್ ಶರ್ಮಾ ಅವರು ಸೋಮವಾರ ಹೇಳಿದ್ದಾರೆ.
ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು ಭೇಟಿಯಾಗುತ್ತಿದ್ದು, ಮಾತುಕತೆ ನಡೆಸಲಿದ್ದಾರೆ. ಈ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಬಿಜೆಪಿ ಹಾಗೂ ಪಿಡಿಪಿ ಮೈತ್ರಿಯಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ಪಿಡಿಪಿ ಹಾಗೂ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಉತ್ತಮವಾಗಿ ಕೆಲಸ ಮಾಡುತ್ತಿದ್ದು, ಪ್ರತೀಯೊಬ್ಬರೂ ಉತ್ತಮವಾಗಿ ತಮ್ಮ ತಮ್ಮ ಕಾರ್ಯ ನಿರ್ವಹಿಸುತ್ತಿದ್ದಾರೆಂದು ಹೇಳಿದ್ದಾರೆ.
ರಾಜ್ಯದ ಮುಖ್ಯಮಂತ್ರಿಗಳು, ಸಚಿವರು ಹಾಗೂ ಉಪ ಮುಖ್ಯಮಂತ್ರಿಗಳಉ ತಮ್ಮ ದೈನಂದಿನ ಕಾರ್ಯಗಳಲ್ಲಿ ತೊಡಗಿಕೊಳ್ಳುತ್ತಿದ್ದಾರೆ. ಮೈತ್ರಿ ಪಕ್ಷಗಳ ನಡುವೆ ಯಾವುದೇ ಭಿನ್ನತೆಗಳಿಲ್ಲ ಎಂದು ತಿಳಿಸಿದ್ದಾರೆ.