ಸಂಗ್ರಹ ಚಿತ್ರ 
ದೇಶ

ಚುನಾವಣೋತ್ತರ ಸಮೀಕ್ಷೆಯಂತೆ ಬಿಜೆಪಿ ಗೆಲುವು ಸಾಧಿಸಿದರೆ, ಚಳವಳಿ ಆರಂಭಿಸುತ್ತೇನೆ: ಸಿಎಂ ಕೇಜ್ರಿವಾಲ್ ಎಚ್ಚರಿಕೆ

ದೆಹಲಿ ಮಹಾನಗರ ಪಾಲಿಕೆಗಳ ಚುನಾವಣೋತ್ತರ ಸಮೀಕ್ಷೆಗಳಂತೆ ಬಿಜೆಪಿ ಗೆಲುವು ಸಾಧಿಸಿದ್ದೇ ಆದರೆ ತಾವು ಮತ್ತೆ ಚಳವಳಿ ಕೂರುವುದಾಗಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಎಚ್ಚರಿಕೆ ನೀಡಿದ್ದಾರೆ.

ನವದೆಹಲಿ: ದೆಹಲಿ ಮಹಾನಗರ ಪಾಲಿಕೆಗಳ ಚುನಾವಣೋತ್ತರ ಸಮೀಕ್ಷೆಗಳಂತೆ ಬಿಜೆಪಿ ಗೆಲುವು ಸಾಧಿಸಿದ್ದೇ ಆದರೆ ತಾವು ಮತ್ತೆ ಚಳವಳಿ ಕೂರುವುದಾಗಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಎಚ್ಚರಿಕೆ ನೀಡಿದ್ದಾರೆ.

ಈ ಹಿಂದೆ ಅಧಿಕಾರಿಗಳ ವರ್ಗಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ವಿರುದ್ಧ ಸತ್ಯಾಗ್ರಹ ಆರಂಭಿಸಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಇದೀಗ ಮತ್ತೆ ಅಂತಹುದೇ  ಕಾರ್ಯಕ್ಕೆ ಮುಂದಾಗಿದ್ದಾರೆ. ಕಳೆದ ಭಾನುವಾರ ಮುಕ್ತಾಯಗೊಂಡ ಎಂಸಿಡಿ ಚುನಾವಣೆಗಳಲ್ಲಿ ಬಿಜೆಪಿ ಪಕ್ಷ ಗೆಲುವು ಸಾಧಿಸಿದ್ದೇ ಆದರೆ ತಾವು ಅಕ್ರಮ ಚುನಾವಣೆ ವಿರುದ್ಧ ಚಳವಳಿ ಅರಂಭಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಎಂಸಿಡಿ ಚುನಾವಣೆಗೂ ಮೊದಲೇ ಮತಯಂತ್ರಗಳಲ್ಲಿ ದೋಷವಿದೆ ಎಂದು ಆರೋಪಿಸಿದ್ದ ಸಿಎಂ ಕೇಜ್ರಿವಾಲ್ ಇದೀಗ ಚುನಾವಣೆಯಲ್ಲಿ ಬಿಜೆಪಿ ಗಲುವು ಸಾಧಿಸಿದರೆ ಮತ್ತೆ ಸತ್ಯಾಗ್ರಹ ಕೂರುವುದಾಗಿ ಹೇಳಿದ್ದಾರೆ.

ಈ ಬಗ್ಗೆ ದೆಹಲಿಯಲ್ಲಿ ಮಾತನಾಡಿದ ಕೇಜ್ರಿವಾಲ್, "ಮತ್ತೆ ಚಳವಳಿ ನಡೆಸಲು ಆಪ್ ಪಕ್ಷಕ್ಕೆ ಯಾವುದೇ ರೀತಿಯ ಮುಜುಗರವಿಲ್ಲ. ಏಕೆಂದರೆ ಚಳವಳಿಯಿಂದಾಗಿ ಆಮ್ ಆದ್ಮಿ ಪಕ್ಷ ಜನಿಸಿದ್ದು. ಉತ್ತರ ಪ್ರದೇಶ, ಪಂಜಾಬ್  ವಿಧಾನಸಭೆ ಹಾಗೂ ಮುಂಬೈ ಮತ್ತು ಪುಣೆ ಮಹಾನಗರ ಪಾಲಿಕೆಗಳಲ್ಲಿ ನಡೆದಂತೆ ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲೂ ಫಲಿತಾಂಶ ಪ್ರಕಟವಾದರೆ ಖಂಡಿತಾ ಮತ್ತೆ ಚಳವಳಿಗೆ ಮರಳಲು ಆಪ್ ಪಕ್ಷ  ಹಿಂಜರಿಯುವುದಿಲ್ಲ. ಚುನಾವಣಾ ಸೋಲು-ಗೆಲುವು ಸಾಮಾನ್ಯವೇ ಆದರೂ ಮತಯಂತ್ರಗಳನ್ನು ದುರ್ಬಳಕೆ ಮಾಡಿಕೊಳ್ಳುವ ಮೂಲಕ ಬಿಜೆಪಿ ಪ್ರಜಾತಂತ್ರ ವ್ಯವಸ್ಥೆಗೆ ವ್ಯತಿರಿಕ್ತವಾಗಿ ವರ್ತಿಸುತ್ತಿದೆ ಎಂದು ಗಂಭೀರ ಆರೋಪ  ಮಾಡಿದರು.

ಅಂತೆಯೇ ಆಪ್ ಪಕ್ಷ ಎಂದಿಗೂ ಅಧಿಕಾರಿಕ್ಕೆ ಅಂಟಿಕೊಂಡಿಲ್ಲ. ಈಗಲೂ ಅಧಿಕಾರ ತ್ಯಜಿಸಿ ಚಳವಳಿ ನಡೆಸಲು ಪಕ್ಷ ಸಿದ್ಧವಾಗಿದೆ ಎಂದೂ ಹೇಳಿದರು.

ಇತ್ತೀಚೆಗೆ ಬಿಡುಗಡೆಯಾದ ಎರಡು ಚುನಾವಣೋತ್ತರ ಮತದಾನ ಸಮೀಕ್ಷೆಯಲ್ಲಿ ಬಿಜೆಪಿಗೆ ಗೆಲುವು ದೊರೆಯಲಿದೆ ಎಂದು ಹೇಳಲಾಗಿತ್ತು. ಒಟ್ಟು 270 ಸದಸ್ಯ ಬಲದ ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಪಕ್ಷ  200ಸದಸ್ಯ ಸ್ಥಾನ ಗೆಲ್ಲಲಿದೆ ಎಂದು ಹೇಳಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ