ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ 
ದೇಶ

ವಾಜಪೇಯಿ ಸರಿಯಿದ್ದರು, ಮೋದಿ ಸರಿಯಿಲ್ಲ ಎಂದು ಮುಫ್ತಿ ಒಪ್ಪಿಕೊಂಡಿದ್ದಾರೆ: ಕಾಂಗ್ರೆಸ್

ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿಯವರು ಸರಿಯಿದ್ದರು. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನಡೆಯುತ್ತಿರುವ ಹಾದಿ ಸರಿಯಿಲ್ಲ ಎಂದು ಸ್ವತಃ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿಯವರೇ ಒಪ್ಪಿಕೊಂಡಿದ್ದಾರೆಂದು...

ಲಖನೌ: ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿಯವರು ಸರಿಯಿದ್ದರು. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನಡೆಯುತ್ತಿರುವ ಹಾದಿ ಸರಿಯಿಲ್ಲ ಎಂದು ಸ್ವತಃ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿಯವರೇ ಒಪ್ಪಿಕೊಂಡಿದ್ದಾರೆಂದು ಕಾಂಗ್ರೆಸ್ ಮಂಗಳವಾರ ಹೇಳಿದೆ. 
ನಿನ್ನೆಯಷ್ಟೇ ಕಾಶ್ಮೀರ ಪರಿಸ್ಥಿತಿ ನಿಭಾಯಿಸಲು ಸಮಸ್ಯೆ ಬಗೆಹರಿಸಲು ವಾಜಪೇಯಿಯವರ ನೀತಿಯನ್ನು ಅನುಸರಿಸುವ ಕುರಿತಂತೆ ಮುಫ್ತಿ ನೀಡಿದ್ದ ಹೇಳಿಕೆ ಸಂಬಂಧ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ನಾಯಕ ಪ್ರಮೋದ್ ತಿವಾರಿಯವರು, ವಾಜುಪೇಯಿಯವರು ಸರಿಯಿದ್ದರು, ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹಾದಿ ತಪ್ಪು ಎಂದು ಮುಫ್ತಿಯವರೇ ಒಪ್ಪಿಕೊಂಡಿದ್ದಾರೆ. ಮೋದಿ ತಪ್ಪು ಹಾದಿಯಲ್ಲಿ ನಡೆಯುತ್ತಿದ್ದಾರೆಂದು ಅನಿಸುತ್ತಿದೆ ಎಂದಾದರೆ, ಅವರೊಂದಿಗಿನ ಮೈತ್ರಿಯನ್ನು ಏಕೆ ಮುಂದುವರೆಸುತ್ತಿದ್ದಾರೆ. ಇಂದಿರಾಗಾಂಧಿ, ರಾಜೀವ್ ಗಾಂಧಿಯವರು ಜನರನ್ನು ವಿಶ್ವಾಸದತ್ತ ಕರೆದುಕೊಂಡು ಹೋಗುತ್ತಿದ್ದ ಹಾದಿ ಸರಿಯಾಗಿತ್ತು. ಆದರೆ, ಪ್ರಸ್ತುತ ಅಧಿಕಾರದಲ್ಲಿರುವ ಸರ್ಕಾರ ತಪ್ಪು ಹಾದಿಯಲ್ಲಿ ನಡೆಯುತ್ತಿದೆ ಎಂದು ಹೇಳಿದ್ದಾರೆ. 
ಕಾಶ್ಮೀರದಲ್ಲಿ ಪ್ರಸ್ತುತ ಪರಿಸ್ಥಿತಿ ತೀವ್ರವಾಗಿ ಹದಗೆಟ್ಟಿದೆ. ಪ್ರಸ್ತುತ ಅಲ್ಲಿನ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲಾಗದಷ್ಟು ಹಾಳಾಗಿದೆ. ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಈ ಮಟ್ಟಕ್ಕೆ ಹಾಳಾಗಲು ಪಿಡಿಪಿ ಮತ್ತು ಬಿಜೆಪಿ ನಡುವಿನ ಮೈತ್ರಿಯೇ ಕಾರಣ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT