ನಾಲ್ವರು ಭಯೋತ್ಪಾದಕರನ್ನು ಗಲ್ಲಿಗೇರಿಸಿದ ಪಾಕಿಸ್ತಾನ
ದೇಶದ ನಾಗರಿಕರು ಹಾಗೂ ಪೊಲೀಸರ ಮೇಲೆ ದಾಳಿ ನಡೆಸಿದ್ದ ನಾಲ್ವರು ಭಯೋತ್ಪಾದಕರಿಗೆ ಪಾಕಿಸ್ತಾನ ಗಲ್ಲು ಶಿಕ್ಷೆ ಜಾರಿಗೊಳಿಸಿದೆ.
ಇಸ್ಲಾಮಾಬಾದ್: ದೇಶದ ನಾಗರಿಕರು ಹಾಗೂ ಪೊಲೀಸರ ಮೇಲೆ ದಾಳಿ ನಡೆಸಿದ್ದ ನಾಲ್ವರು ಭಯೋತ್ಪಾದಕರಿಗೆ ಪಾಕಿಸ್ತಾನ ಗಲ್ಲು ಶಿಕ್ಷೆ ಜಾರಿಗೊಳಿಸಿದೆ.
ಪಾಕಿಸ್ತಾನದ ಖೈಬರ್ ಪಖ್ತುನ್ಖ್ವಾದ ಪ್ರಾಂತ್ಯದಲ್ಲಿ ನಾಲ್ವರು ಉಗ್ರರಿಗೆ ಗಲ್ಲು ಶಿಕ್ಷೆ ಜಾರಿಗೊಳಿಸಲಾಗಿದೆ ಎಂದು ಪಾಕಿಸ್ತಾನ ಸೇನೆ ತಿಳಿಸಿದೆ. ಗಲ್ಲು ಶಿಕ್ಷೆಗೆ ಗುರಿಯಾದ ಉಗ್ರರು ತೆಹ್ರೀಕ್-ಎ-ತಾಲೀಬಾನ್ ಪಾಕಿಸ್ತಾನ(ಟಿಟಿಪಿ) ಉಗ್ರರೆಂದು ಹೇಳಲಾಗಿದೆ.
ಕಳೆದ ವಾರ ಪಾಕಿಸ್ತಾನದ ನ್ಯಾಯಾಲಯ 30 ಉಗ್ರರಿಗೆ ಗಲ್ಲು ಶಿಕ್ಷೆ ಪ್ರಕಟಿಸಿ ಆದೇಶ ಹೊರಡಿಸಿತ್ತು. ಈ ಪೈಕಿ ಇಗ 4 ಉಗ್ರರಿಗೆ ಗಲ್ಲು ಶಿಕ್ಷೆ ಜಾರಿಯಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.