ಕೋಲ್ಕತ್ತಾ: ಸುಕ್ಮಾ ಜಿಲ್ಲೆಯಲ್ಲಿ ಸಿಆರ್ ಪಿಎಫ್ ಯೋಧರ ಮೇಲೆ ದಾಳಿ ನಡೆಸಿದ ದುಷ್ಕರ್ಮಿಗಳಿಗೆ ಬಿಜೆಪಿ ತಕ್ಕ ಶಿಕ್ಷೆ ನೀಡಲಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.
ಕೋಲ್ಕತಾದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅಮಿತ್ ಶಾ, ಸುಕ್ಮಾ ಎನ್ ಕೌಂಟರ್ ದಾಳಿಯ ವಿಚಾರವಾಗಿ ಬಿಜೆಪಿ ಕಠಿಣ ನಿರ್ಧಾರ ಕೈಗೊಳ್ಳಲಿದೆ ಎಂದು ಭರವಸೆ ನೀಡಿದ್ದಾರೆ. ಅಭಿವೃದ್ಧಿಯಿಂದ ಮಾತ್ರ ಹಿಂಸಾಚಾರ ಕೊನೆಗಾಣಲು ಸಾಧ್ಯ ಎಂದು ಹೇಳಿರುವ ಅಮಿತ್ ಶಾ, ಈ ಪ್ರಕ್ರಿಯೆಗೆ ಅಡ್ಡಿ ಬರುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಸುಕ್ಮಾ ದಾಳಿಯ ಬಗ್ಗೆ ಕೇಂದ್ರ ಗೃಹ ಇಲಾಖೆ ವರದಿ ಕೇಳಿದ್ದು, ನಕ್ಸಲರನ್ನು ನಿಗ್ರಹಿಸುವುದಕ್ಕೆ ಕಾರ್ಯತಂತ್ರ ರೂಪಿಸುವಂತೆ ಅಧಿಕಾರಿಗಳಿಗೆ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.