ದೇಶ

ದೆಹಲಿ ಮಹಾನಗರ ಪಾಲಿಕೆ ಫಲಿತಾಂಶ: ಕೇಜ್ರಿವಾಲ್ ವಿರುದ್ಧ ಅಣ್ಣಾ ಹಜಾರೆ ವಾಗ್ದಾಳಿ

Lingaraj Badiger
ರಾಳೆಗಣ್ ಸಿದ್ಧಿ: ಹಿರಿಯ ಸಾಮಾಜಿಕ ಹೋರಾಟಗಾರ ಹಾಗೂ ಒಂದು ಕಾಲದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಗುರುವಾಗಿದ್ದ ಅಣ್ಣಾ ಹಜಾರೆ ಅವರು ದೆಹಲಿ ಮಹಾನಗರ ಪಾಲಿಕೆಗಳ ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಿದ ತಮ್ಮ ಶಿಷ್ಯ ಹಾಗೂ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಕೇಜ್ರಿವಾಲ್ ವಿರುದ್ಧ ಬುಧವಾರ ವಾಗ್ದಾಳಿ ನಡೆಸಿದ್ದಾರೆ.
ದೆಹಲಿ ಮಹಾನಗರ ಪಾಲಿಕೆಗಳ ಚುನಾವಣೆಯಲ್ಲಿ ಎಎಪಿ ಸೋಲಿನ ಬಗ್ಗೆ ಪ್ರತಿಕ್ರಿಯಿಸಿರುವ ಅಣ್ಣಾ ಹಜಾರೆ ಅವರು, ಕೇಜ್ರಿವಾಲ್ ಅವರು ಹೇಳುವುದಕ್ಕು ಮಾಡುವುದುಕ್ಕೂ ತುಂಬಾ ವ್ಯತ್ಯಾಸವಿದೆ ಎಂದಿದ್ದಾರೆ.
ದೆಹಲಿಯಲ್ಲಿ ಎಎಪಿ ಹೀನಾಯ ಸೋಲಿನಿಂದ ನಾನು ದುಃಖಿತನಾಗುತ್ತಾನೆ ಎಂದಿರುವ ಭ್ರಷ್ಟಾಚಾರ ವಿರೋಧಿ ಹೋರಾಟಗಾರ, ಜನ ಅರವಿಂದ್ ಕೇಜ್ರಿವಾಲ್ ಮೇಲಿನ ನಂಬಿಕೆ ಕಳೆದುಕೊಳ್ಳುತ್ತಿದ್ದಾರೆ ಎಂದು ಹೇಳಿದ್ದಾರೆ.
ಇವಿಎಂ ಯಂತ್ರಗಳನ್ನು ತಿರುಚಲಾಗಿದೆ ಎಂಬ ಎಎಪಿ ಆರೋಪದ ಬಗ್ಗೆಯೂ ಪ್ರತಿಕ್ರಿಯಿಸಿರುವ ಅಣ್ಣಾ ಹಜಾರೆ ಅವರು, ಸೋಲಿನ ನಂತರ ಯಾರೊಬ್ಬರೂ ಇವಿಎಂ ಅನ್ನು ದೂಷಿಸಬಾರದು ಎಂದಿದ್ದಾರೆ.
ದೆಹಲಿಯ ಮೂರು ಮಹಾನಗರ ಪಾಲಿಕೆಗಳ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಿದ್ದು, ಮೂರರಲ್ಲೂ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಎಎಪಿ ಹಾಗೂ ಕಾಂಗ್ರೆಸ್ ಎರಡು, ಮೂರನೇ ಸ್ಥಾನಕ್ಕೆ ಕುಸಿದಿವೆ.
SCROLL FOR NEXT