ಟಿಟಿವಿ ದಿನಕರನ್ 
ದೇಶ

ಚುನಾವಣಾ ಆಯೋಗಕ್ಕೆ ಲಂಚ ಆರೋಪ: ದೆಹಲಿ ಪೊಲೀಸರಿಂದ ಟಿಟಿವಿ ದಿನಕರನ್ ಬಂಧನ

ಶಶಿಕಲಾ ಸೋದರ ಸಂಬಂಧಿ ಟಿಟಿವಿ ದಿನಕರನ್ ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಎರಡೆಲೆ ಚಿಹ್ನೆ ಪಡೆಯಲು ಚುನಾವಣಾ ಆಯೋಗದ ...

ನವದೆಹಲಿ: ಶಶಿಕಲಾ ಸೋದರ ಸಂಬಂಧಿ ಟಿಟಿವಿ ದಿನಕರನ್ ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಎರಡೆಲೆ ಚಿಹ್ನೆ ಪಡೆಯಲು ಚುನಾವಣಾ ಆಯೋಗದ ಅಧಿಕಾರಿಗಳಿಗೆ ಲಂಚ ನೀಡಲು ಯತ್ನಿಸಿದ ಆರೋಪದ ಮೇಲೆ,ಸತತ ನಾಲ್ಕು ದಿನಗಳ ಕಾಲ ವಿಚಾರಣೆ ನಡೆಸಿದ ಪೊಲೀಸರು ಎಐಎಡಿಎಂಕೆ (ಅಮ್ಮ) ಪಕ್ಷದ ನಾಯಕ ಟಿಟಿವಿ ದಿನಕರನ್ ಅವರನ್ನು ಮಂಗಳವಾರ ಮಧ್ಯರಾತ್ರಿ ಅರೆಸ್ಟ್ ಮಾಡಿದ್ದಾರೆ.
ದಿನಕರನ್ ಗೆ ರಕ್ಷಣೆ ನೀಡಿದ ಆರೋಪದ ಮೇಲೆ ಆಪ್ತ ಮಲ್ಲಿಕಾರ್ಜುನ ಅವರನ್ನೂ ಸಹ ಬಂಧಿಸಲಾಗಿದೆ. ಬುಧವಾರ ಮಧ್ಯಾಹ್ನ ಬಂಧಿತರನ್ನು ಕೋರ್ಟ್​ಗೆ ಹಾಜರು ಪಡಿಸಲಾಗುವುದು, ದೆಹಲಿ ಪೊಲೀಸರು ದಿನಕರನ್,  ಸುಖೇಶ್ ಚಂದ್ರ ಶೇಖರ್ ನನ್ನು ಒಟ್ಟಿಗೆ ವಿಚಾರಣೆಗೆ ಒಳಪಡಿಸಿ ಲಂಚ ನೀಡಲು ಪ್ರಯತ್ನಿಸಿದ ಆರೋಪದ ಕುರಿತು ಹೆಚ್ಚಿನ ಮಾಹಿತಿ ಕಲೆ ಹಾಕಿದರು. .
ದಿನಕರನ್ ಬಂಧನದ ಬಗ್ಗೆ ಪ್ರತಿಕ್ರಿಯಿಸಿರುವ ಎಏಐಎಡಿಎಂಕೆ(ಅಮ್ಮಾ) ವಕ್ತಾರ ಪುಗಳೇಂದಿ ಈ ಪ್ರಕರಣ ರಾಜಕೀಯ ದುರುದ್ದೇಶದಿಂದ ಕೂಡಿದೆ ಎಂದು ಆರೋಪಿಸಿದ್ದಾರೆ. ಪಕ್ಷದ ಎಲ್ಲಾ ವ್ಯವಹಾರಗಳನ್ನು ದಿನಕರನ್ ನಿಷ್ಠೆಯಿಂದ ನೋಡಿಕೊಳ್ಳುತ್ತಿದ್ದರು. ಹೀಗಾಗಿ ಅವರನ್ನು ಗುರಿಯಾಗಿಸಿಕೊಳ್ಳಲಾಗಿದೆ. ಅವರಿಗೆ ಜಾಮೀನು ಪಡೆಯಲು ನಾವು ಅಪೀಲು ಹೋಗುತ್ತೇವೆ ಎಂದು ಹೇಳಿದ್ದಾರೆ.
ಎಲ್ಲಾ ಆರೋಪಗಳು ದಿನಕರನ್ ವಿರುದ್ಧವೇ ಇವೆ. ಆತಕನ ವಿರುದ್ಧ ಏಕೆ ಯಾವ ಕ್ರಮಗಳನ್ನು ಜರುಗಿಸಿಲ್ಲ ಎಂದು ನ್ಯಾಯಾಧೀಶ ಪೂನಂ ಚೌಧುರಿ ದೆಹಲಿ ಕ್ರೈಂ ಬ್ರಾಂಚ್ ನ ಪೊಲೀಸ್ ಅಧಿಕಾರಿಗಳಿಗೆ ಪ್ರಶ್ನಿಸಿದ್ದಾರೆ. ಹೆಚ್ಚಿನ ವಿಚಾರಣೆಗಾಗಿ ದೆಹಲಿ ಕೋರ್ಟ್ ಸುಖೇಶ್ ಚಂದ್ರಶೇಖರ್ ಪೊಲೀಸ್ ಕಸ್ಟಡಿಯನ್ನು ವಿಸ್ತರಿಸಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

'ನಾನು ಕ್ಯಾಬ್‌ನಲ್ಲಿ ಓಡಾಡೋ ಹುಡುಗಿ ಕಣ್ರೋ.. ಹೋಗ್ಲಿ ಪಾಪ ಅಂತಾ ಬಸ್`ನಲ್ಲಿ ಬಂದೆ': MTC ಬಸ್‌ನಲ್ಲಿ ಕುಡಿದ ಮತ್ತಿನಲ್ಲಿ ಯುವತಿ ರಂಪಾಟ, Video ವೈರಲ್

ಅಮೆರಿಕ ಸೇನೆಯ ಮಾಜಿ ಮೇಜರ್‌ಗೆ ಶೂಟ್ ಮಾಡುವ ಮೂಲಕ ಮರಣದಂಡನೆ ಶಿಕ್ಷೆ: 65 ವರ್ಷಗಳಲ್ಲಿ ಇದೇ ಮೊದಲು!

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!