ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ 
ದೇಶ

ರಾಷ್ಟ್ರಪತಿ ಸ್ಥಾನಕ್ಕೆ ಆನಂದಿಬೆನ್ ಪಟೇಲ್ ಅತ್ಯುತ್ತಮ ಅಭ್ಯರ್ಥಿ: ಸುಬ್ರಮಣಿಯನ್ ಸ್ವಾಮಿ

ರಾಷ್ಟ್ರಪತಿ ಚುನಾವಣೆ ಹತ್ತಿರಬರುತ್ತಿದ್ದು, ಎಲ್ಲರ ಚಿತ್ತ ಇದೀಗ ರಾಷ್ಟ್ರಪತಿ ಭವನದತ್ತ ಹರಿಯಲು ಆರಂಭವಾಗುತ್ತಿದೆ. ಇದರ ಬೆನ್ನಲ್ಲೇ, ರಾಷ್ಟ್ರಪತಿ ಸ್ಥಾನಕ್ಕೆ ಗುಜರಾತ್ ಮಾಜಿ ಮುಖ್ಯಮಂತ್ರಿ ಆನಂದಿಬೆನ್ ಪಟೇಲ್ ಅವರು ಅತ್ಯುತ್ತಮ ಅಭ್ಯರ್ಥಿಯೆಂದು...

ನವದೆಹಲಿ: ರಾಷ್ಟ್ರಪತಿ ಚುನಾವಣೆ ಹತ್ತಿರಬರುತ್ತಿದ್ದು, ಎಲ್ಲರ ಚಿತ್ತ ಇದೀಗ ರಾಷ್ಟ್ರಪತಿ ಭವನದತ್ತ ಹರಿಯಲು ಆರಂಭವಾಗುತ್ತಿದೆ. ಇದರ ಬೆನ್ನಲ್ಲೇ, ರಾಷ್ಟ್ರಪತಿ ಸ್ಥಾನಕ್ಕೆ ಗುಜರಾತ್ ಮಾಜಿ ಮುಖ್ಯಮಂತ್ರಿ ಆನಂದಿಬೆನ್ ಪಟೇಲ್ ಅವರು ಅತ್ಯುತ್ತಮ ಅಭ್ಯರ್ಥಿಯೆಂದು ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿಯವರು ಹೇಳಿದ್ದಾರೆ. 
ಈ ಕುರಿತಂತೆ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಹೇಳಿಕೊಂಡಿರುವ ಸುಬ್ರಮಣಿಯನ್ ಸ್ವಾಮಿಯವರು, ರಾಷ್ಟ್ರಪತಿ ಸ್ಥಾನಕ್ಕೆ ಅತ್ಯುತ್ತಮವಾದ ಅಭ್ಯರ್ಥಿಯೆಂದರೆ ಅದು ಗುಜರಾತ್ ಮಾಜಿ ಮುಖ್ಯಮಂತ್ರಿ ಆನಂದಿಬೆನ್ ಪಟೇಲ್ ಅವರು. ಆನಂದಿಬೆನ್ ಪಟೇಲ್ ಅವರು ಗುಜರಾತಿ ಆದರೇನು? ನಾನೂ ಕೂಡ ಗುಜರಾತ್ ರಾಜ್ಯದ ಅಳಿಯ ಎಂದು ಹೇಳಿಕೊಂಡಿದ್ದಾರೆ. 
ಮುಂಬರುವ ಜುಲೈ ತಿಂಗಳ ಅಂತ್ಯದಲ್ಲಿ ರಾಷ್ಟ್ರಪತಿ ಚುನಾವಣೆ ನಡೆಯುವ ಸಾಧ್ಯತೆಗಳಿವೆ. ಹೀಗಾಗಿ, ಬಿಜೆಪಿ ಸೇರಿದಂತೆ ಇತರೆ ಪಕ್ಷಗಳ ಚಿತ್ತ ಇದೀಗ ರಾಷ್ಟ್ರಪತಿ ಭವನದತ್ತ ಹರಿದಿದೆ. ಗುಜರಾತ್ ನ ಬಿಜೆಪಿ ಕಾರ್ಯಕರ್ತರು ರಾಷ್ಟ್ರಪತಿ ಸ್ಥಾನಕ್ಕೆ ಪಟೇಲ್ ಅವರು ನಿಂತರೆ ಹೇಗೆ ಎಂಬುದರ ಬಗ್ಗೆ ಚಿಂತನೆ ನಡೆಸುತ್ತಿದ್ದಾರೆ. ಇದಕ್ಕೆ ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿಯವರು ಬೆಂಬಲ ಸೂಚಿಸಿದ್ದಾರೆ. ಆದರೆ, ಉಳಿದ ಇನ್ನಾವುದೇ ಬಿಜೆಪಿ ನಾಯಕರು ಈ ಬಗ್ಗೆ ಯಾವುದೇ ರೀತಿಯ ಪ್ರತಿಕ್ರಿಯೆಗಳನ್ನು ನೀಡಿಲ್ಲ. ಈ ಬಗ್ಗೆ ಆನಂದಿಬೆನ್ ಪಟೇಲ್ ಅವರೂ ಕೂಡ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT